ದಣಿವೂ ಇಲ್ಲ, ನಿವೃತ್ತಿಯೂ ಆಗಿಲ್ಲ: ಅಜಿತ್‌ ಪವಾರ್‌ಗೆ ಶರದ್‌ ಪವಾರ್‌ ತಿರುಗೇಟು

Date:

  • ಇಂಡಿಯಾ ಟುಡೇನ ಮರಾಠಿ ಡಿಜಿಟಲ್‌ ವಾಹಿನಿ ಮುಂಬೈ ಟಾಕ್‌ ಸಂದರ್ಶನದಲ್ಲಿ ಶರದ್‌ ಪವಾರ್‌ ಮಾತು
  • ವಯಸ್ಸಿನ ಕಾರಣದಿಂದ ರಾಜಕಾರಣದಿಂದ ಶರದ್‌ ಪವಾರ್ ನಿವೃತ್ತಿಗೆ ಸಲಹೆ ನೀಡಿದ್ದ ಅಜಿತ್‌ ಪವಾರ್

“ನನಗೆ ಇನ್ನೂ ದಣಿವಾಗಿಲ್ಲ. ಹಾಗೆಯೇ ಇನ್ನೂ ನಿವೃತ್ತಿಯೂ ಆಗಿಲ್ಲ” ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸಹೋದರನ ಪುತ್ರ ಅಜಿತ್ ಪವಾರ್ ಮಾತಿಗೆ ಶನಿವಾರ (ಜುಲೈ 8) ತಿರುಗೇಟು ನೀಡಿದ್ದಾರೆ.

ತಾವು ಸಕ್ರಿಯ ರಾಜಕಾರಣದಿಂದ ನಿವೃತ್ತರಾಗಬೇಕು ಎಂದು ಅಜಿತ್‌ ನೀಡಿದ ಸಲಹೆಗೆ ಶರದ್‌ ಪವಾರ್‌ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಅಧ್ಯಕ್ಷನಾಗಿ ತಮ್ಮ ಸೇವೆಯನ್ನು ಮುಂದುವರಿಸಲು ಬಯಸಿದ್ದಾರೆ ಎಂದು ಇದೇ ವೇಳೆ ಪವಾರ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊರಾರ್ಜಿ ದೇಸಾಯಿ ಅವರು ಯಾವ ವಯಸ್ಸಿನಲ್ಲಿ ಪ್ರಧಾನಿ ಆದರು ಎಂಬುದು ಗೊತ್ತಿದೆಯೇ? ನಾನು ಪ್ರಧಾನಿ ಆಗಲು ಅಥವಾ ಸಚಿವನಾಗಲು ಬಯಸುವುದಿಲ್ಲ. ಜನ ಸೇವೆಯೊಂದೇ ನನ್ನ ಧ್ಯೇಯ” ಎಂದು ಹೇಳಿದ್ದಾರೆ.

ಶರದ್‌ ಪವಾರ್‌ ಅವರಿಗೆ ಈಗ 83 ವರ್ಷವಾಗಿದೆ. ಇದು ಅವರ ನಿವೃತ್ತಿಗೆ ಸೂಕ್ತ ಸಮಯ ಎಂದು ಅಜಿತ್‌ ಪವಾರ್‌ ಹೇಳಿದ್ದರು.

“ನ ಟೈರ್ಡ್ ಹೂಂ, ನ ರಿಟೈರ್ಡ್ ಹೂಂ (ದಣಿವೂ ಆಗಿಲ್ಲ, ನಿವೃತ್ತಿಯೂ ಆಗಿಲ್ಲ)” ಎಂಬ ಅಟಲ್‌ ಬಿಹಾರಿ ವಾಜಪೇಯಿ ಅವರ ಮಾತನ್ನು ಪವಾರ್‌ ಅವರು ಇದೇ ವೇಳೆ ಉಲ್ಲೇಖಿಸಿದರು.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ನೇಮಕ

“ನನಗೆ ನಿವೃತ್ತಿಯ ಸಲಹೆ ನೀಡಲು ಅವರು ಯಾರು? ನಾನು ಇನ್ನೂ ದುಡಿಯಬಲ್ಲೆ” ಎಂದು ಇಂಡಿಯಾ ಟುಡೇನ ಮರಾಠಿ ಡಿಜಿಟಲ್‌ ವಾಹಿನಿ ಮುಂಬೈ ಟಾಕ್‌ಗೆ ನೀಡಿದ ಸಂದರ್ಶನದಲ್ಲಿ ಪವಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

“ತಮ್ಮ ಪುತ್ರನಲ್ಲ ಎಂಬ ಕಾರಣಕ್ಕೆ ನನ್ನನ್ನು ಶರದ್‌ ಪವಾರ್ ಕಡೆಗಣಿಸಿದರು” ಎಂಬ ಅಜಿತ್ ಪವಾರ್‌ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಾರ್, “ಕುಟುಂಬದ ವಿಷಯವನ್ನು ನಾನು ಹೊರಗೆ ಚರ್ಚಿಸಲು ಬಯಸುವುದಿಲ್ಲ. ಅಜಿತ್ ಪವಾರ್ ಅವರನ್ನು ಮಂತ್ರಿ, ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಆದರೆ ಮಗಳು ಸುಪ್ರಿಯಾ ಸುಳೆಗೆ ಯಾವುದೇ ಮಂತ್ರಿ ಹುದ್ದೆ ನೀಡಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...