‘ಶೀಶ್ ಮಹಲ್’ ಪ್ರಕರಣ: ಕೇಜ್ರಿವಾಲ್ ವಿರುದ್ಧ ತನಿಖೆಗೆ ಕೇಂದ್ರ ಆದೇಶ

Date:

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿಯಾಗಿದ್ದಾಗ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಶೀಶ್‌ ಮಹಲ್‌’ನ ಐಷಾರಾಮಿ ನವೀಕರಣ ಕಾಮಗಾರಿ ನಡೆಸಲಾಗಿದ್ದು, ಆ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಕಟ್ಟಡ ಮಾನದಂಡಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿವರವಾದ ತನಿಖೆ ನಡೆಸಲು ಕೇಂದ್ರ ಸರ್ಕಾರವು ಆದೇಶಿಸಿದೆ.

ಅಕ್ರಮ ಮತ್ತು ಮಾನಡಂಗಳ ಉಲ್ಲಂಘನೆ ಕುರಿತು ತನಿಖೆ ನಡೆಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಗೆ (ಸಿಪಿಡಬ್ಲ್ಯೂಡಿ) ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಕೇಳಿದೆ.

ಮುಖ್ಯಮಂತ್ರಿಗಳ ನಿವಾಸ ಶೀಶ್‌ ಮಹಲ್ 40,000 ಚದರ ಗಜಗಳಷ್ಟು (8 ಎಕರೆ) ವಿಸ್ತಾರವಾದ ಪ್ರದೇಶದಲ್ಲಿದೆ. ಈ ಕಟ್ಟಡವನ್ನು ನಿರ್ಮಿಸಲು ಕಟ್ಟಡ ಮಾನದಂಡಗಳನ್ನು ಉಲ್ಲಂಘಿಸಿ, ಯೋಜನೆ ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯ 6 ಫ್ಲ್ಯಾಗ್ ಸ್ಟಾಫ್ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದ (ಶೀಶ್‌ ಮಹಲ್) ನವೀಕರಣದಲ್ಲಿ ಅಕ್ರಮ ನಡೆದಿದೆ. ಕಟ್ಟಡ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು 2024ರ ಅಕ್ಟೋಬರ್ 14ರಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಅವರು ಸಿವಿಸಿಗೆ ದೂರು ನೀಡಿದ್ದರು.

“ರಾಜ್‌ಪುರ ರಸ್ತೆಯಲ್ಲಿರುವ ಸರ್ಕಾರಿ ನಿವಾಸಗಳ ಸಂಖ್ಯೆ 45 ಮತ್ತು 47 (ಹಿಂದೆ ಹಿರಿಯ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ನಿವಾಸಗಳನ್ನು ನೀಡಲಾಗಿತ್ತು) ಎರಡು ಬಂಗಲೆಗಳನ್ನು ಕೆಡವಿ ಶೀಶ್‌ ಮಹಲ್‌ ಜೊತೆಗೆ ವಿಲೀನಗೊಳಿಸಲಾಗಿದೆ. ಇದು ಕಟ್ಟಡ ಮಾನದಂಡಗಳನ್ನು ಉಲ್ಲಂಘಿಸಿದೆ. ಯೋಜನೆಗೆ ವಿನ್ಯಾಸ ಅನುಮೋದನೆಯನ್ನೂ ಪಡೆಯಲಾಗಿಲ್ಲ” ಎಂದು ದೂರಿನಲ್ಲಿ ಆರೋಪಿಸಿದ್ದರು.

“ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದ ಐಷಾರಾಮಿ ಸೌಕರ್ಯಗಳಿಗಾಗಿ ತೆರಿಗೆದಾರರ ಕೋಟ್ಯಂತರ ಹಣವನ್ನು ಖರ್ಚು ಮಾಡಿದ್ದಾರೆ. ಐಷಾರಾಮಿ ವಸ್ತುಗಳ ಮೇಲಿನ ಖರ್ಚುಗಳು ಸೂಚಿಸಲಾದ ಮಿತಿಗಳನ್ನು ಮೀರಿವೆ. ಅಕ್ರಮ ನಡೆದಿದೆ” ಎಂದು ಆರೋಪಿಸಿದ್ದರು.

ದೂರು ದಾಖಲಾದ ಬಳಿಕ, ಫೆಬ್ರವರಿ 13 ರಂದು ಸಿಎಂ ನಿವಾಸದ ವಾಸ್ತವಿಕ ವರದಿಯನ್ನು ಸಿಪಿಡಬ್ಲ್ಯೂಡಿ ಸಲ್ಲಿಸಿದೆ. ಇದೀಗ, ತನಿಖೆ ನಡೆಸುವಂತೆ ಸಿವಿಸಿ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...