ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್‌ ವಾಪಸ್ಸಾಗಿದ್ದಾರೆ: ಆರ್ ಅಶೋಕ್

Date:

ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಗದೀಶ್ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು”‌ ಎಂದರು.

“ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು. ಶೆಟ್ಟರ್ ಅವರು ಮರಳಿ ಗೂಡಿಗೆ ಬಂದಿರುವುದನ್ನು ತುಂಬು ಹೃದಯದಿಂದ ಸ್ವಾಗತ ಮಾಡಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ. ಇನ್ನೇನಿದ್ದರೂ ‘ಕಾಂಗ್ರೆಸ್ ಚೋಡೊ’ ಎಂಬ ಘೋಷಣೆ ಕೇಳಿಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್ ನಾಲಾಯಕ್ ಎಂದು ಓಡಿಸಿದೆ. ಕಾಂಗ್ರೆಸ್ ಪಕ್ಷವನ್ನು ದೆಹಲಿಯಿಂದಲೂ ಹೊರಗೆ ಹಾಕಲಾಗುತ್ತದೆ‌. ಈ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಧೂಳಿಪಟವಾಗಲಿದೆ” ಎಂದರು.

“ಬಿಜೆಪಿಯವರು ನಮ್ಮಲ್ಲಿಗೆ ಬಂದರು ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದರು. ಈಗ ಆ ಮಾತುಗಳು ನಿಲ್ಲಲಿದೆ. ಕಾಂಗ್ರೆಸ್ ನಲ್ಲಿ ನಾಯಕರ ಗತಿ ಇಲ್ಲವಾಗಿರುವುದರಿಂದ ನಮ್ಮ ನಾಯಕರನ್ನು ಕರೆಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...