ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ದೂಷಿಸಿದ ಶಿಂದೆ ಬಣದ ನಾಯಕ

Date:

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ಏಕನಾಥ್ ಶಿಂದೆ ಬಣದ ನಾಯಕ ದೂಷಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ಮಹಾಯುತಿ ಒಕ್ಕೂಟ ನೀಡಿದೆ. ಇದಾದ ಬಳಿಕ ಪರಸ್ಪರ ಆರೋಪಗಳನ್ನು ಹೊರಿಸುವುದು ಒಳಗೊಳಗೆ ಆರಂಭವಾಗಿದೆ.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಪ್ರಮುಖ ನಾಯಕ ರಾಮದಾಸ್ ಕದಮ್ ಅವರು ಮಹಾಯುತಿಯ ಕಳಪೆ ಪ್ರದರ್ಶನಕ್ಕೆ ಸಮ್ಮಿಶ್ರ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೇ ಕಾರಣ ಎಂದು ಸಾರ್ವಜನಿಕವಾಗಿ ದೂಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿ ಮಧ್ಯಪ್ರವೇಶಿಸುತ್ತಿದೆ. ಇದು ಪ್ರಮುಖ ಕ್ಷೇತ್ರಗಳಲ್ಲಿ ಶಿಂದೆ ಬಣದ ಸೋಲಿಗೆ ಕಾರಣವಾಗಿದೆ ಎಂದು ಕದಮ್ ಆರೋಪಿಸಿದ್ದಾರೆ.

“ಬಿಜೆಪಿಯ ಹಸ್ತಕ್ಷೇಪದಿಂದಾಗಿ ನಾಸಿಕ್, ಹಿಂಗೋಲಿ ಮತ್ತು ವಾಸಿಂ ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ. ಇಲ್ಲದಿದ್ದರೆ ಹೇಮಂತ್ ಗೋಡ್ಸೆ, ಹೇಮಂತ್ ಪಾಟೀಲ್ ಮತ್ತು ಭಾವನಾ ಗವಾಲಿ ಅವರು ಲೋಕಸಭೆಯ ಸಂಸದರಾಗಿ ಮರು ಆಯ್ಕೆಯಾಗುತ್ತಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿಯೂಬಿಜೆಪಿ ಅದೇ ತಪ್ಪು ಮಾಡದು ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?  ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

“ರಾಜ್ಯ ಚುನಾವಣೆಯಲ್ಲಿ ಶಿವಸೇನೆಯ ಜೊತೆ ಬಿಜೆಪಿ ನ್ಯಾಯಯುತವಾಗಿ ನಡೆದುಕೊಳ್ಳಲು ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತನಾಡಬೇಕು. ಬಳಿಕ ತಮ್ಮ ನಿಲುವನ್ನು ತೆಗೆದುಕೊಳ್ಳಬೇಕು” ಎಂದು ರಾಮದಾಸ್ ಕದಮ್ ಆಗ್ರಹಿಸಿದರು.

“ಲೋಕಸಭಾ ಚುನಾವಣೆಯಲ್ಲಿ, ನಾವು ನಮ್ಮ ಸಾಂಪ್ರದಾಯಿಕ ಮತ್ತು ಹಾಲಿ ಲೋಕಸಭಾ ಸಂಸದರ ಸ್ಥಾನಗಳನ್ನು ಪಡೆಯಲು ನಿರ್ಧರಿಸಿದಾಗ, ಬಿಜೆಪಿ ಈ ಸ್ಥಾನಗಳ ಮೇಲೆ ಹಕ್ಕು ಸಾಧಿಸಲು ಪ್ರಾರಂಭಿಸಿತು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾದರೆ ಈ ರೀತಿ ಆಗಬಾರದು” ಎಂದು ಹೇಳಿದರು.

“ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿಯಲ್ಲಿ 100 ಸ್ಥಾನಗಳನ್ನು ನಮಗೆ ನೀಡಿ. ನಾವು 100ರಲ್ಲಿ 90 ಸ್ಥಾನಗಳನ್ನು ಖಂಡಿತವಾಗಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ” ಎಂದು ಶಿಂದೆ ಬಣದ ನಾಯಕ ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾಯುತಿಗೆ ಸೇರ್ಪಡೆಯಾಗಿರುವುದು ನಮ್ಮ ಬಣಕಕ್ಕೆ ನಕಾರಾತ್ಮಕವಾಗಿ ಪರಿಣಾಮ ಬೀರಿದೆ ಎಂದೂ ಹೇಳಿದರು. ಕದಮ್ ಹೇಳಿಕೆಯನ್ನು ಎನ್‌ಸಿಪಿ ವಕ್ತಾರ ಅಮೋಲ್ ಮಿಟ್ಕರಿ ಟೀಕಿಸಿದ್ದಾರೆ.


“ರಾಮದಾಸ್ ಕದಮ್ ಅವರೇ ನೀವು ಅಜಿತ್ ಪವಾರ್ ಸ್ವಲ್ಪ ತಡವಾಗಿ ಬಂದಿದ್ದರೆ ಚೆನ್ನಾಗಿತ್ತು ಎಂದು ಹೇಳಿದ್ದೀರಿ. ನಿಮ್ಮ ಮಾಹಿತಿಗಾಗಿ ಅಜಿತ್ ಸಮಯಕ್ಕೆ ಬಂದಿದ್ದಾರೆ ಎಂದು ನಿಮಗೆ ತಿಳಿಸಲು ಬಯಸುತ್ತೇನೆ. ಅಜಿತ್ ಪವಾರ್ ಅವರ ಕೃಪೆಯಿಂದ ನಿಮ್ಮ ರಕ್ಷಿಸಲಾಗಿದೆ ಎಂಬುವುದನ್ನು ಮರೆಯಬೇಡಿ” ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದೆ ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ಕೂಡ ಮಹಾಯುತಿಯ ಚುನಾವಣಾ ಅವನತಿಗೆ ಅಜಿತ್ ಪವಾರ್ ಮತ್ತು ಅವರ ಪಕ್ಷವನ್ನು ದೂಷಿಸಿತ್ತು. ಈ ನಡುವೆ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಎನ್‌ಸಿಪಿಯ ಅಜಿತ್ ಬಣವನ್ನು ಬಿಜೆಪಿ ನಾಯಕತ್ವವು ಮೈತ್ರಿ ಕೂಟದಿಂದ ಹೊರಗಿಡಲಿದೆ ಎಂಬ ಊಹಾಪೋಹಗಳು ಕೂಡಾ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...