ಪೊಲೀಸ್‌ ಠಾಣೆಯಲ್ಲೇ ಶಿಂಧೆ ಬಣದ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕ ಸೇರಿ ಮೂವರ ಬಂಧನ

Date:

ಶಿವಸೇನೆಯ ಏಕನಾಥ್ ಶಿಂಧೆ ಬಣದ ಕಲ್ಯಾಣ್ ನಗರ ಅಧ್ಯಕ್ಷ ಮಹೇಶ್ ಗಾಯಕ್ವಾಡ್ ಮೇಲೆ ಪೊಲೀಸ್ ಠಾಣೆಯಲ್ಲಿಯೇ ಗುಂಡಿನ ದಾಳಿ ನಡೆದಿದೆ. ಪ್ರಕರಣದಲ್ಲಿ ಕಲ್ಯಾಣ್ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಮತ್ತು ಅವರ ಇಬ್ಬರು ಸಹಚರರನ್ನು ಥಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಆಸ್ತಿ ವಿವಾದವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶಾಸಕ ಗಣಪತ್ ಮತ್ತು ಮಹೇಶ್ ಹಿಲ್ ಲೈನ್ ಠಾಣೆಗೆ ಬಂದಿದ್ದರು. ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಅವರನ್ನು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕೊಠಡಿಯಲ್ಲಿ ಕೂರಿಸಲಾಗಿತ್ತು. ಅಲ್ಲಿಯೂ ವಾಗ್ವಾದ ಮಾಡಿಕೊಂಡಿದ್ದು, ಮಹೇಶ್‌ ಮತ್ತು ರಾಹುಲ್ ಮೇಲೆ ಗಣಪತ್ ಮತ್ತು ಹರ್ಷಲ್‌ ನಾನಾ ಕೇನ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಶಾಸಕ ಮತ್ತು ಆತನ ಸಹಚರನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಂದೀಪ್ ಅನಂತ್ ಸರ್ವಾಂಕರ್ ಮತ್ತು ಇತರರ ಮೇಲೂ ಪ್ರಕರಣ ದಾಖಲಿಸಲಾಗಿದೆ. ಗಣಪತ್, ಹರ್ಷಲ್ ಹಾಗೂ ಅನಂತ್‌ನನ್ನು ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕುತ್ತಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ (ವಲಯ 4-ಥಾಣೆ) ಸುಧಾಕರ ಪತ್ತಾರೆ ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಮಹೇಶ್ ಮತ್ತು ರಾಹುಲ್ ಪಾಟೀಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಕೀಯ ವೈಷಮ್ಯದಿಂದ ಜಗಳ ನಡೆದಿದೆಯೇ ಅಥವಾ ಯಾವುದಾದರೂ ವೈಯಕ್ತಿಕ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...