ನೀತಿ ಆಯೋಗ ಸಭೆಯಲ್ಲಿ ಮಮತಾ ಬ್ಯಾನರ್ಜಿಗೆ ಅವಮಾನ: ಸಂಜಯ್ ರಾವತ್ ಖಂಡನೆ

Date:

ಶನಿವಾರ ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಕೇಂದ್ರ ಸರ್ಕಾರದ ಈ ನಡೆಯನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಖಂಡಿಸಿದ್ದಾರೆ. ಹಾಗೆಯೇ ಈ ರೀತಿ ಅವಮಾನ ಮಾಡುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗ ಸಭೆಯನ್ನು ವಿಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಬಹಿಷ್ಕರಿಸಿದ್ದರು. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ಈ ಸಭೆಗೆ ಹಾಜರಾಗಿದ್ದರು. ಆದರೆ “ಸಭೆಯಲ್ಲಿ ಮೈಕ್ ಆಫ್ ಮಾಡಲಾಗಿದೆ, ಮಾತನಾಡಲು ಅವಕಾಶ ನೀಡಿಲ್ಲ, ಅವಮಾನಿಸಲಾಗಿದೆ” ಎಂದು ಮಮತಾ ಬ್ಯಾನರ್ಜಿ ಸಭೆಯಿಂದ ಹೊರನಡೆದಿದ್ದರು.

“ಆಂಧ್ರಪ್ರದೇಶ, ಗೋವಾ, ಅಸ್ಸಾಂ ಮತ್ತು ಛತ್ತೀಸ್‌ಗಢ ಸೇರಿದಂತೆ ಇತರ ಮುಖ್ಯಮಂತ್ರಿಗಳಿಗೆ ಹೆಚ್ಚು ಕಾಲ ಮಾತನಾಡಲು ಅವಕಾಶ ನೀಡಿದ್ದಾರೆ. ಆದರೆ ನನ್ನ ಭಾಷಣಕ್ಕೆ ಐದು ನಿಮಿಷವಾಗುತ್ತಿದ್ದಂತೆ ಮೈಕ್‌ ಅನ್ನು ಸ್ವಿಚ್ ಆಫ್ ಮಾಡಲಾಗಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಾತನಾಡಲು ಅವಕಾಶ ನೀಡದ ಆರೋಪ; ನೀತಿ ಆಯೋಗ ಸಭೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ

ಮಾತನಾಡಲು ಅವಕಾಶ ನೀಡದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗೆ ಅವಮಾನ ಮಾಡಿರುವುದನ್ನು ಸಂಜಯ್ ರಾವತ್ ಖಂಡಿಸಿದ್ದಾರೆ. “ರಾಜ್ಯಗಳು ಹಲವಾರು ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಹೀಗಿರುವಾಗ ಮುಖ್ಯಮಂತ್ರಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವದ ಮಾನದಂಡಗಳಿಗೆ ಸರಿಹೊಂದುವುದಿಲ್ಲ” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಮೈತ್ರಿಕೂಟದ ವಿರುದ್ಧವೂ ಈ ಸಂದರ್ಭದಲ್ಲೇ ಸಂಜಯ್ ರಾವತ್ ವಾಗ್ದಾಳಿ ನಡೆಸಿದರು. “ಕೇಂದ್ರವು ವಿತರಿಸುವ ಹಣವು ಭಾರತದ ಜನರಿಗೆ ಸೇರಿದೆ. ಅದನ್ನು ವಿವಿಧ ತೆರಿಗೆ ರೂಪದಲ್ಲಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿದೆ? ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು” ಎಂದು ಟೀಕಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...