ಯುಪಿ ಸಿಎಂ ನಿವಾಸದಡಿಯಲ್ಲಿ ಶಿವಲಿಂಗವಿದೆ: ಅಖಿಲೇಶ್ ಯಾದವ್

Date:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋದ ಅಧಿಕೃತ ನಿವಾಸದ ಅಡಿಯಲ್ಲಿ ಹಿಂದೂ ದೇವರು ಶಿವನನ್ನು ಪ್ರತಿನಿಧಿಸುವ ಶಿವಲಿಂಗವಿದೆ. ಅಲ್ಲಿಯೂ ಅಗೆಯಿರಿ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಸಂಭಲ್ ಸೇರಿದಂತೆ ಹಲವೆಡೆ ಸಮೀಕ್ಷೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ತನ್ನ ವೈಫಲ್ಯವನ್ನು ಮರೆಮಾಚಲು ಮತ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ವಿವಿಧ ಸ್ಥಳಗಳಲ್ಲಿ ಭೂಶೋಧನೆ ಮಾಡುತ್ತಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಮೀರತ್‌ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿಯವರ ನಿವಾಸದ ಕೆಳಗೆ ಶಿವಲಿಂಗವಿದೆ ಎಂದು ನಾವು ನಂಬುತ್ತೇವೆ. ಅಲ್ಲಿಯೂ ಭೂಶೋಧನೆ ಮಾಡಲಿ” ಎಂದು ಅಖಿಲೇಶ್ ಯಾದವ್, “ಬುಲ್ಡೋಜರ್‌ಗಳಿಂದ ಅಮಾಯಕರ ಮನೆಗಳನ್ನು ಅಕ್ರಮವಾಗಿ ಕೆಡವಲಾಗುತ್ತಿದೆ” ಎಂದು ಆರೋಪಿಸಿದರು.

ಹಾಗೆಯೇ, “ಇದು ಅಭಿವೃದ್ಧಿಯಲ್ಲ ಆದರೆ ವಿನಾಶ. ಮುಖ್ಯಮಂತ್ರಿಯ ಕೈಯಲ್ಲಿ ಅಭಿವೃದ್ಧಿಯ ರೇಖೆಯಿಲ್ಲ, ವಿನಾಶದ ರೇಖೆ ಇದೆ” ಎಂದರು.

ಅಖಿಲೇಶ್ ಯಾದವ್‌ಗೆ ಬಿಜೆಪಿ ಪ್ರತಿಕ್ರಿಯೆ

ಇನ್ನು ಅಖಿಲೇಶ್ ಯಾದವ್‌ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಅಖಿಲೇಶ್ ಯಾದವ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ, “ಸಂಭಲ್‌ನಲ್ಲಿ ಭೂಶೋಧನೆ ಮಾಡುವುದಿಂದ ಅವರಿಗೆ ಏನು ಸಮಸ್ಯೆ ಇದೆ” ಎಂದು ಪ್ರಶ್ನಿಸಿದರು.

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ಅಖಿಲೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮತ ಬ್ಯಾಂಕ್‌ಗಾಗಿ ಶಿವಲಿಂಗದ ಅಪಹಾಸ್ಯ ಮಾಡಲಾಗುತ್ತಿದೆ ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...