ತಪ್ಪಿದ ಸಿಎಂ ಸ್ಥಾನ: ಮಹಿಳಾ ಅಭಿಮಾನಿಗಳೊಂದಿಗೆ ಭಾವುಕರಾದ ಶಿವರಾಜ್‌ ಸಿಂಗ್ ಚೌಹಾಣ್

Date:

ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಿವರಾಜ್ ಸಿಂಗ್ ಚೌಹಾಣ್ ಅವರ ಬದಲಿಗೆ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಯಾದವ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜಭವನಕ್ಕೆ ಭೇಟಿ ನೀಡಿದ ಚೌಹಾಣ್, ರಾಜ್ಯಪಾಲ ಮಂಗೂಭಾಯಿ ಪಟೇಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಒಬಿಸಿ ನಾಯಕ ಮತ್ತು ಮೂರು ಬಾರಿ ಶಾಸಕರಾಗಿರುವ ಮೋಹನ್ ಯಾದವ್ (58) ಅವರನ್ನು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಹೇಳಿದರು. ಈ ಮೂಲಕ ಮಧ್ಯಪ್ರದೇಶದಲ್ಲಿ ಮೂರು ಬಾರಿ ಸಿಎಂ ಆಗಿ ಆಡಳಿತ ನಡೆಸಿದ್ದ, ಮಹಿಳೆಯರ ವಲಯದಲ್ಲಿ ‘ಮಾಮಾ’ ಆಗಿ ಗುರುತಿಸಿಕೊಂಡಿದ್ದ ಚೌಹಾಣ್ ಅವರ ಯುಗ ಅಂತ್ಯವಾಯಿತು. ಆ ಮೂಲಕ ನಾಲ್ಕು ಬಾರಿಯ ಸಿಎಂ ಅನ್ನು ಬಿಜೆಪಿ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತನಾಗಿ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶಿವರಾಜ್ ಸಿಂಗ್ ಚೌಹಾಣ್ ಮನೆಗೆ ಭೇಟಿ ನೀಡಿದ ಮಹಿಳಾ ಬೆಂಬಲಿಗರು ಭಾವುಕರಾಗಿ, ಬಿಜೆಪಿ ಹೈಕಮಾಂಡ್ ಸಿಎಂ ಸ್ಥಾನ ತಪ್ಪಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಇವರೊಂದಿಗೆ ಶಿವರಾಜ್ ಸಿಂಗ್ ಚೌಹಾಣ್ ಕೂಡ ಭಾವುಕರಾದ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ವೈರಲ್ ಆಗಿರುವ ವೀಡಿಯೊವೊಂದರಲ್ಲಿ, ‘ಲಾಡ್ಲಿ ಬೆಹನ್’ ಯೋಜನೆಯ ಫಲಾನುಭವಿಗಳು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡು ಅಳುತ್ತಿರುವುದನ್ನು ಕಾಣಬಹುದು. ಜೊತೆಗೆ ನೀವು ಮುಖ್ಯಮಂತ್ರಿ ಸ್ಥಾನವನ್ನು ತೊರೆಯಬೇಡಿ ಎಂದು ಆಗ್ರಹಿಸುತ್ತಿರುವುದು ದಾಖಲಾಗಿದೆ.

“ನೀವು ಎಲ್ಲರಿಗೂ ಪ್ರೀತಿಪಾತ್ರರು. ನಾವು ನಿಮಗೋಸ್ಕರ ಮತ ಹಾಕಿದ್ದೇವೆ. ನಿಮ್ಮನ್ನು ನಾವು ಬಿಟ್ಟುಕೊಡಲ್ಲ” ಎಂದು ಮಹಿಳೆಯರು ಭಾವುಕರಾಗಿ ಹೇಳಿದಾಗ, “ನಾನು ಯಾವತ್ತಿಗೂ ನಿಮ್ಮೊಂದಿಗೆ ಇದ್ದೇನೆ. ನಾನೂ ನಿಮ್ಮೊಂದಿಗೆ ಇರುತ್ತೇನೆ. ನಾನು ಕೂಡ ಎಲ್ಲಿಗೂ ಹೋಗಲ್ಲ” ಎನ್ನುತ್ತಿದ್ದಂತೆಯೇ ಶಿವರಾಜ್ ಸಿಂಗ್ ಚೌಹಾಣ್ ಕೂಡ ಭಾವುಕರಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು 16 ವರ್ಷ 5 ತಿಂಗಳುಗಳ ಆಡಳಿತ ನಡೆಸಿದ ನಂತರ ರಾಜೀನಾಮೆ ನೀಡಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರವು ‘ಲಾಡ್ಲಿ ಬೆಹ್ನಾ ಯೋಜನೆ’ಯನ್ನು ಮೊದಲು ಪರಿಚಯಿಸಿತ್ತು. ಆರಂಭದಲ್ಲಿ ಈ ಯೋಜನೆಯಡಿ ಮಹಿಳೆಯರಿಗೆ 1,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದ್ದು, ಆಗಸ್ಟ್‌ನಲ್ಲಿ 1,250 ರೂಪಾಯಿಗೆ ಹೆಚ್ಚಿಸಲಾಗಿತ್ತು.

ಈ ಬಾರಿಯ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಕೂಡ, ಅಚ್ಚರಿ ಎಂಬಂತಹ ಫಲಿತಾಂಶ ಹೊರಬಂದಿತ್ತು. ಒಟ್ಟು 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದಿತ್ತು. ಉಳಿದಂತೆ ಕಮಲ್‌ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷವು 66 ಸ್ಥಾನಗಳಲ್ಲಿ ಗೆದ್ದಿದ್ದರೆ, ಒಂದರಲ್ಲಿ ಭಾರತ್ ಆದಿವಾಸಿ ಪಕ್ಷವು ಗೆಲುವು ಪಡೆದುಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...