ತಮಿಳರ ವಿರುದ್ಧ ಅವಹೇಳನ; ಕ್ಷಮೆಯಾಚಿಸಿದ ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ

Date:

ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ತೀವ್ರ ವಿರೋಧ ವ್ಯಕ್ತವಾದ ಬಳಿಕ ಕ್ಷಮೆಯಾಚಿಸಿದ್ದಾರೆ.

“ನನ್ನ ತಮಿಳು ಸಹೋದರರು ಮತ್ತು ಸಹೋದರಿಯರಿಗೆ ನೋವುಂಟು ಮಾಡುವುದು ನನ್ನ ಉದ್ದೇಶವಲ್ಲ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿದೆ ಎಂದು ಗೊತ್ತಾಯಿತು. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಟೀಕೆಗಳು ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರು ಮತ್ತು ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಮಾತ್ರ ಸಂಬಂಧಿಸಿವೆ. ತಮಿಳುನಾಡಿನ ಯಾರಿಗಾದರೂ ನೋವಾಗಿದ್ದರೆ, ನನ್ನ ಹೃದಯಾಂತರಾಳದಿಂದ ಕ್ಷಮೆಯನ್ನು ಕೇಳುತ್ತೇನೆ. ನಾನು ನನ್ನ ಹಿಂದಿನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ” ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹಿಂದುಗಳು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮೇಲೆ ವಾಗ್ದಾಳಿ ನಡೆಸಿರುವ ಶೋಭಾ, “ಮಿಸ್ಟರ್ ಸ್ಟಾಲಿನ್, ನಿಮ್ಮ ಆಡಳಿತದಲ್ಲಿ ತಮಿಳುನಾಡಿಗೆ ಏನು ದೊರೆತಿದೆ? ನಿಮ್ಮ ತುಷ್ಟೀಕರಣ ರಾಜಕೀಯವು ಹಿಂದುಗಳು ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಗಲು ರಾತ್ರಿ ದಾಳಿ ಮಾಡುವುದನ್ನು ಉತ್ತೇಜಿಸಿದೆ. ಐಸಿಸ್‌ನಂತಹ ಭಯೋತ್ಪಾದಕ ಸಂಘಟನೆಗಳಂತೆ ಆಗಾಗ್ಗೆ ಬಾಂಬ್ ಸ್ಫೋಟ ನಡೆಯುವಾಗ, ನೀವು ಕಣ್ಮುಚ್ಚಿ ಕುಳಿತಿರುತ್ತೀರಿ” ಎಂದು ಕಿರಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...