ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಕಾಂಗ್ರೆಸ್ ನಾಯಕರೊಬ್ಬರ ಖಾಸಗಿ ಕಚೇರಿಯ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ನಿತೀಶ್ ಸಿಂಗ್ ಕಚೇರಿಯ ಮೇಲೆ ದಾಳಿ ನಡೆದಿದೆ. ಮಾಸ್ಕ್ ಹಾಕಿದ್ದ ಮೂವರು ಬೈಕ್‌ನಲ್ಲಿ ಬಂದು ಕಾಂಗ್ರೆಸ್ ನಾಯಕರ ಕಚೇರಿಯನ್ನು ಗುರಿಯಾಗಿಸಿಕೊಂಡು ಸುಮಾರು 10ರಿಂದ 12 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ
ನಿತೀಶ್ ಸಿಂಗ್‌ಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಆದರೆ ಅವರ ಸೋದರಮಾವ ಚಂದ್ರಕಾಂತ್ ಸಿಂಗ್ ಠಾಕೂರ್ ಮತ್ತು ಸಹೋದರ ರಾಜು ಸಿಂಗ್‌ಗೆ ಗಾಯವಾಗಿದೆ. ಚಂದ್ರಶೇಖರ್ ಅವರ ಕಾಲಿಗೆ, ರಾಜು ಅವರ ಎಡಗೈಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ದಾಳಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ದಾಳಿಕೋರರು ಪಿಸ್ತೂಲ್ ಅಥವಾ ದೇಶಿ ಪಿಸ್ತೂಲ್ ಅನ್ನು ಹೊಂದಿದ್ದರು. ಸದ್ಯ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





