ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳೇ ಇಲ್ಲವೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ” ಎಂದು ಟೀಕಿಸಿದ್ದಾರೆ.
“ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಖಾಸಗಿ ಏಜೆನ್ಸಿ ಮೂಲಕ 22,500 ರೂಪಾಯಿ ವೇತನ ಕೊಟ್ಟು ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ಕರ್ನಾಟಕದ ನಿರುದ್ಯೋಗಿ ಯುವಕರಿಗೆ ಮಾತ್ರ ಯುವನಿಧಿ ಗ್ಯಾರಂಟಿ ಹೆಸರಿನಲ್ಲಿ ಪಂಗನಾಮ ಹಾಕಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.
“ಕನ್ನಡಿಗರ ತೆರಿಗೆ ಹಣದಲ್ಲಿ ನಡೆಯುವ ಬಿಎಂಟಿಸಿ ಸಂಸ್ಥೆಯ ದುಡ್ಡನ್ನು ಕರ್ನಾಟಕದ ಯುವಕರಿಗೆ ಉದ್ಯೋಗ ನೀಡಲು ಬಳಸದೆ ಕೇರಳದ ಪಾಲಾಗಲು ಬಿಡುವುದು ಯಾವ ಸೀಮೆ ನ್ಯಾಯ? ಕನ್ನಡಿಗರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ? ಕರ್ನಾಟಕದ ಯುವಕರ ಮೇಲೆ ಯಾಕಿಷ್ಟು ತಾತ್ಸಾರ” ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ
ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸಬಿಎಂಟಿಸಿ ಎಲಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಖಾಸಗಿ ಏಜೆನ್ಸಿ ಮೂಲಕ 22,500 ರೂಪಾಯಿ ವೇತನ ಕೊಟ್ಟು ಕೇರಳದ ಮಲಯಾಳಿ ಯುವಕರನ್ನು ನೇಮಕ ಮಾಡಿಕೊಂಡಿರುವ @INCKarnataka ಸರ್ಕಾರ, ಕರ್ನಾಟಕದ ನಿರುದ್ಯೋಗಿ ಯುವಕರಿಗೆ ಮಾತ್ರ ಯುವನಿಧಿ ಗ್ಯಾರೆಂಟಿ ಹೆಸರಿನಲ್ಲಿ ಪಂಗನಾಮ… pic.twitter.com/b0253XKWug
— R. Ashoka (ಮೋದಿ ಅವರ ಕುಟುಂಬ) (@RAshokaBJP) May 30, 2024





