ಆರ್‌ಎಸ್‌ಎಸ್‌ ಮುಖ್ಯಸ್ಥರು ಕುಂಭಮೇಳಕ್ಕೆ ಹೋಗಿರುವ ಚಿತ್ರ ತೋರಿಸಿ: ಶಿಂದೆ ವಿರುದ್ಧ ರಾವತ್ ವಾಗ್ದಾಳಿ

Date:

ಇತ್ತೀಚೆಗೆ ಮುಕ್ತಾಯವಾದ ಮಹಾ ಕುಂಭಮೇಳ ವಿಚಾರದಲ್ಲಿ ಮಹಾರಾಷ್ಟ್ರದ ಆಡಳಿತರೂಢ ಶಿವಸೇನೆ (ಶಿಂದೆ ಬಣ) ಮತ್ತು ವಿರೋಧ ಪಕ್ಷ ಶಿವಸೇನೆ (ಯುಬಿಟಿ) ನಡುವೆ ತೀವ್ರ ವಾಗ್ವಾದ ನಡೆಯುತ್ತಿದೆ. ಮಹಾ ಕುಂಭಮೇಳಕ್ಕೆ ಹೋಗದ ವಿಪಕ್ಷ ನಾಯಕರುಗಳನ್ನು ಬಿಜೆಪಿ ಮತ್ತು ಎನ್‌ಡಿಎ ಕೂಟದ ಪಕ್ಷಗಳು ಟೀಕಿಸುತ್ತಿದೆ. ಇದಕ್ಕೆ ತಿರುಗೇಟು ನೀಡಿರುವ ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್, “ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಕುಂಭಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ ಶಿವಸೇನೆ ಮುಖ್ಯಸ್ಥ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಅದಕ್ಕೂ ಮುನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕುಟುಂಬಸಮೇತರಾಗಿ ಕುಂಭಮೇಳಕ್ಕೆ ತೆರಳಿ ಗಂಗಾ ನದಿಯಲ್ಲಿ ಮಿಂದೆದ್ದಿದ್ದರು. ಇವೆಲ್ಲವುದರ ನಡುವೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಕುಂಭಮೇಳಕ್ಕೆ ಭೇಟಿ ನೀಡದಿರುವುದನ್ನು ಶಿಂದೆ ಟೀಕಿಸಿದ್ದರು.

ಇದನ್ನು ಓದಿದ್ದೀರಾ? ಬಾಲಾಸಾಹೇಬರ ಸಿದ್ಧಾಂತ ತ್ಯಜಿಸಿದವರ ಪಾಪ ತೊಳೆಯಲು ಕುಂಭಮೇಳಕ್ಕೆ ಹೋದೆ: ಉದ್ಧವ್‌ಗೆ ಶಿಂದೆ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾ ಕುಂಭಮೇಳಕ್ಕೆ ಭೇಟಿ ನೀಡದವರ ಬಳಿ ನಾವು ಯಾಕೆ ಈ ಪುಣ್ಯ ಕಾರ್ಯಕ್ರಮಕ್ಕೆ ಹೋಗಿಲ್ಲ ಎಂದು ಕೇಳಬೇಕಾಗಿದೆ. ನಾವು ಹಿಂದೂಗಳು ಎಂದು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ. ಆದರೆ ಕುಂಭಮೇಳಕ್ಕೆ ಮಾತ್ರ ಹೋಗಿಲ್ಲ” ಎಂದು ಶಿಂದೆ ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು “ಗಂಗಾ ನದಿಯಲ್ಲಿ ಮುಳುಗಿ ಏಳುವುದರಿಂದ ಮಹಾರಾಷ್ಟ್ರಕ್ಕೆ ದ್ರೋಹ ಬಗೆದ ಪಾಪ ಹೋಗುವುದಿಲ್ಲ” ಎಂದಿದ್ದರು. ಠಾಕ್ರೆ ಹೇಳಿಕೆಗೆ ಮತ್ತೆ ಶಿಂದೆ ಪ್ರತಿಕ್ರಿಯೆ ನೀಡಿದ್ದು, “ಶಿವಸೇನೆ ಸ್ಥಾಪಕ ಬಾಲಾಸಾಹೇಬ ಠಾಕ್ರೆ ಅವರ ಸಿದ್ಧಾಂತ ತ್ಯಜಿಸಿ ಪಾಪ ಮಾಡಿದವರ ಪಾಪವನ್ನು ತೊಳೆಯಲು ತಾನು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದೆ” ಎಂದರು.

ಹೀಗೆ ನಿರಂತರವಾಗಿ ಮುಂದುವರಿದ ವಾಕ್ಸಮರದ ನಡುವೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಹಾ ಕುಂಭಮೇಳದ ವಿಚಾರದಲ್ಲಿ ರಾಜಕೀಯ ಪ್ರಚಾರ ಮಾಡುತ್ತಿರುವ ಆರ್‌ಎಸ್‌ಎಸ್‌ ನಾಯಕರು ತಬ್ಬಿಬ್ಬಾಗುವಂತೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದ ವಿಜಯಪುರದ ಇಬ್ಬರ ಸಾವು

“ಉದ್ಧವ್‌ ಠಾಕ್ರೆ, ಇತರೆ ನಾಯಕರು ಮಹಾ ಕುಂಭಮೇಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸುವ ಶಿಂದೆ ಅವರು ಇದೇ ಪ್ರಶ್ನೆಯನ್ನು ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಅವರನ್ನೂ ಕೂಡಾ ಕೇಳುವ ಧೈರ್ಯ ಹೊಂದಿರಬೇಕು. ಬಿಜೆಪಿಯ ‘ಬಾಸ್’ ಹಿಂದೂ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಸಂಗಮದಲ್ಲಿ ಆರ್‌ಎಸ್‌ಎಸ್‌ ನಾಯಕರು ಪವಿತ್ರ ಸ್ನಾನ ಮಾಡುವ ಚಿತ್ರವನ್ನು ನಾನು ನೋಡಿಲ್ಲ. ಕೇಶವ್ ಬಲಿರಾಮ್ ಹೆಗ್ಡೆವಾರ್, ಗುರು ಗೋಲ್ವಾಲ್ಕರ್, ಬಾಲಸಾಹೇಬ್, ರಜ್ಜು ಬೈಯ್ಯ, ಕೆ ಎಸ್ ಸುದರ್ಶನ್ ಅವರಂತಹ ಆರ್‌ಎಸ್‌ಎಸ್ ನಾಯಕರು ಪವಿತ್ರ ಸ್ನಾನ ಮಾಡಿರುವುದು ನಾನು ನೋಡಿಲ್ಲ. ವೀರ್‌ ಸಾವರ್ಕರ್ ಅಥವಾ ಬಾಲಸಾಹೇಬ್ ಠಾಕ್ರೆ ಅವರ ಚಿತ್ರವನ್ನು ನಾನು ಕುಂಭಮೇಳದಲ್ಲಿ ನೋಡಿಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...