ಖಜಾನೆ ಖಾಲಿ, ರೈತರ ಸಂಕಷ್ಟಕ್ಕೂ ಮಿಡಿಯದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್‌ ಟೀಕೆ

Date:

ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ” ಎಂದರು.

“ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮ ವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕೂಡಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು‌. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರ ತಕ್ಷಣ ಬ್ಯಾಂಕ್, ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಸಭೆ ಕರೆಯಲಿ: ಬಿ ವೈ ವಿಜಯೇಂದ್ರ

“ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ” ಎಂದು ಟೀಕಿಸಿದರು.

ಸಹಾಯಧನ ಘೋಷಿಸಿ

“ಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆ ಉಳಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...