ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ ಆಪ್ತ ಸಚಿವ ಕೆ ಎನ್ ರಾಜಣ್ಣ

Date:

ಸಿಎಂ ಸಿದ್ದರಾಮಯ್ಯ ಆಪ್ತ ಮತ್ತು ಸಚಿವ ಸಂಪುಟದ ಸಹಕಾರ ಸಚಿವ ಕೆ ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ.

ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ” ಎಂದಿದ್ದಾರೆ.

“ಕೆ ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಣೆ ಮಾಡುತ್ತಾರೆ. ಸಕ್ರಿಯ ರಾಜಕೀಯದಲ್ಲಿ ಇದ್ದೇ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡವಾದವರನ್ನು ಸೋಲಿಸುವ ನನ್ನ ಮುಂದಿನ ಕೆಲಸ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಿಸುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿಸುತ್ತೇನೆ. ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನವನ್ನು ಮುಂದುವರೆಸುತ್ತೇನೆ. ನನ್ನ ಅಧಿಕಾರ ಮುಗಿಯುವುದರೊಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ” ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, “ಸಿಎಂ ಆಗಿ ಸಿದ್ದರಾಮಯ್ಯ ಮುಂದುವಋಿಯುತ್ತಾರೆ. ಯಾವ ಅನುಮಾನವೂ ಬೇಡ. ಬಿಜೆಪಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಗಿದೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ” ಎಂದರು.

ಕೆ ಎನ್ ರಾಜಣ್ಣ ಹಾಲಿ ಮಧುಗಿರಿ ಕ್ಷೇತ್ರದ ಶಾಸಕರು. 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್‌ನ ಎಂ ವಿ ವೀರಭದ್ರಯ್ಯ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...