ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

Date:

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಇರುತ್ತಾರೋ ಮೂರು ವರ್ಷ ಇರುತ್ತಾರೋ ಅದು ಹೈಕಮಾಂಡ್‌ಗೆ ಗೊತ್ತಿರುವ ವಿಚಾರ. ಆದರೆ ಈಗಂತೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇದರಲ್ಲಿ ಅನುಮಾನ ಬೇಡ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮಂಗಳವಾರ ಮೈಸೂರಿಗೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ, “ಸಚಿವ ಮಹದೇವಪ್ಪ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಅವರ ಮನೆ ಹಾಗೂ ನಮ್ಮ ಮನೆ ಅಕ್ಕ ಪಕ್ಕ ಇವೆ. ಪ್ರತಿನಿತ್ಯ ನಾವು ಭೇಟಿ ಆಗುತ್ತಿರುತ್ತೇವೆ. ಇಂದು ರಾತ್ರಿ 9 ಗಂಟೆಯವರೆಗೂ ಮಹದೇವಪ್ಪ ಜೊತೆಗೆ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇನೆ” ಎಂದರು.

“ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷಗಳ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ, ಬೆಳವಣಿಗೆ ನಡೆದಿಲ್ಲ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ನಾಯಕರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವೇ ಸಾಮಾನ್ಯ‌. ಇದನ್ನೇ ಮುಂದಿಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎನ್ನೋದು ಸರಿಯಲ್ಲ” ಎಂದರು.

ಇನ್ನು ಸಿಎಂ ರೇಸ್‌ನಲ್ಲಿ ಡಿ ಕೆ ಶಿವಕುಮಾರ್ ಇದ್ದಾರಾ, ಇಲ್ಲವೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಮತ್ತೊಬ್ಬರ ವಿಚಾರ ನಾನು ಹೇಳಲು ಆಗೋದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...