ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲೇಶ್ವರಂ‌ನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, “ಉಚಿತ ಡಯಾಲಿಸಿಸ್‌ ಸೇವೆಯನ್ನು ಉದ್ಘಾಟಿಸಿದ್ದೇವೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗೆ ಇದು ಬಹಳ ಅನುಕೂಲಕರವಾಗಲಿದೆ. ವಾರಕ್ಕೆ ಮೂರು ಸಲ ಡಯಾಲಿಸಿಸ್‌ ಮಾಡಿಸಬೇಕು. ವಾರಕ್ಕೆ ಕನಿಷ್ಠ ಆರು ಸಾವಿರ ಉಳಿಯುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಡಯಾಲಿಸಿಸ್‌ ಸೇವೆಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ 219 ಡಯಾಲಿಸಿಸ್‌ ಕೇಂದ್ರಗಳು ಇವೆ. ಇಲ್ಲಿ 800 ಯಂತ್ರಗಳನ್ನು ಅಳವಡಿಸುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

“ನಮ್ಮ ಸರ್ಕಾರ ಗುಣಮಟ್ಟದ ಆರೋಗ್ಯ ಸೇವೆ ಕೊಡಲು ಸದಾ ಸಿದ್ಧ. ಕಿಡ್ನಿ ವೈಫಲ್ಯ ಎಲ್ಲರಿಗೂ ಬರುತ್ತದೆ. ಕೆ ಸಿ ಜನರಲ್‌ ಆಸ್ಪತ್ರೆ ಬಹಳ ಹಳೆಯದು. 26 ವರ್ಷ ಆಗಿದೆ. ಈ ಒಂದು ಸೌಕರ್ಯ ಇಲ್ಲಿ ಒದಗಿಸಿದ್ದೇವೆ. ಇನ್ನೂ ಹೆಚ್ಚಿನ ಸೇವೆ ಕೊಡುತ್ತೇವೆ” ಎಂದು ಭರವಸೆ ನೀಡಿದರು.‌

ಕೆ.ಸಿ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ

“ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ, 150 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನ ಮೇಲ್ದರ್ಜೆಗೆ ಏರಿಸುವುದಾಗಿ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೆ.ಸಿ ಜನರಲ್ ಆಸ್ಪತ್ರೆ ತುಂಬ ಹಳೆಯ ಆಸ್ಪತ್ರೆ. ಇಲ್ಲಿಗೆ ಸಾಕಷ್ಟು ರೋಗಿಗಳ ಬರುತ್ತಾರೆ. 150 ಕೋಟಿ ವೆಚ್ಚದಲ್ಲಿ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ದಿನೇಶ್ ಗುಂಡೂರಾವ್ ಪ್ರಸ್ತಾವನೆಯನ್ನ ಕ್ಯಾಬಿನೆಟ್ ಗೆ ತರುವುದಾಗಿ ಹೇಳಿದ್ದಾರೆ. ಕ್ಯಾಬಿನೆಟ್ ನಲ್ಲಿ ಪ್ರಸ್ತಾವನೆಗೆ ನಾವು ಒಪ್ಪಿಗೆ ನೀಡುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...