15 ತಿಂಗಳ ಮಗುವೊಂದು ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಕಾಯಿಲೆ ಗುಣಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯಸ್ತವನ್ನು ಸಿಎಂ ಸಿದ್ದರಾಮಯ್ಯ ಅವರು ಕೋರಿದ್ದಾರೆ.
ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಕೋರಿ ಮೋದಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
“ಪ್ರಧಾನಿ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಕೋರಿದ್ದಾರೆ.
ಪ್ರಧಾನಿ @narendramodi ಅವರೇ,
ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು… pic.twitter.com/1mW5o1Dw99— CM of Karnataka (@CMofKarnataka) November 1, 2023





