ಸಮೀಕ್ಷೆಯಲ್ಲಿ ಭಾಗವಹಿಸಲು ಮೂರ್ತಿ ದಂಪತಿ ಹಿಂದೇಟು: ‘ಇನ್ಫೋಸಿಸ್‌ನವರು ಬೃಹಸ್ಪತಿಗಳಾ’ ಎಂದ ಸಿದ್ದರಾಮಯ್ಯ

Date:

ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. “ಇನ್ಫೋಸಿಸ್‌ನವರು ಬೃಹಸ್ಪತಿಗಳಾ” ಎಂದು ಸಿಎಂ ಪ್ರಶ್ನಿಸಿದ್ದಾರೆ. ಹಾಗೆಯೇ, “ಇದು ಬರೀ ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲ ಬದಲಾಗಿ ಎಲ್ಲಾ ವರ್ಗಗಳ ಸಮೀಕ್ಷೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಸಮೀಕ್ಷೆಯಲ್ಲಿ ಭಾಗಿಯಾಗುವುದು ಬಿಡುವುದು ಅವರಿಗೆ ಬಿಟ್ಟದ್ದು. ಆದರೆ ಇದು ಬರೀ ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲ. ಅವರಿಗೆ ಅರ್ಥವಾಗದಿದ್ದರೆ, ನಾನು ಏನು ಮಾಡಬಹುದು? ಅವರು ಇನ್ಫೋಸಿಸ್ ಆಗಿರುವುದರಿಂದ, ಅವರು ಎಲ್ಲವನ್ನೂ ತಿಳಿದಿದ್ದಾರೆ ಎಂದು ಅರ್ಥವೇ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ನಾವು ಹಿಂದುಳಿದವರಲ್ಲ; ಜಾತಿವಾರು ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣ ಮೂರ್ತಿ-ಸುಧಾ ಮೂರ್ತಿ ನಿರಾಕರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಹಲವು ಬಾರಿ ಸ್ಪಷ್ಟಪಡಿಸಿದ್ದೇವೆ. ಆದರೂ ಸುಧಾ ಮತ್ತು ನಾರಾಯಣ ಮೂರ್ತಿ ಇದನ್ನು ಹಿಂದುಳಿದ ವರ್ಗಗಳ ಸಮೀಕ್ಷೆ ಎಂದು ಭಾವಿಸಿದ್ದಾರೆ. ಅದು ತಪ್ಪು. ಕೇಂದ್ರ ಸರ್ಕಾರವೂ ಸಮೀಕ್ಷೆ ನಡೆಸುತ್ತಿದೆ. ಅವರಿಗೆ ತಪ್ಪು ಮಾಹಿತಿಯಿದೆ” ಎಂದರು.

ಸಮೀಕ್ಷೆ ನಡೆಸುವ ತಂಡ ಮನೆಗೆ ಭೇಟಿ ನೀಡಿದಾಗ ಮೂರ್ತಿ ದಂಪತಿ, “ನಮ್ಮ ಮನೆಯಲ್ಲಿ ಸಮೀಕ್ಷೆ ನಡೆಸುವುದು ನಮಗೆ ಇಷ್ಟವಿಲ್ಲ. ನಾವು ಯಾವುದೇ ಹಿಂದುಳಿದ ಸಮುದಾಯಕ್ಕೆ ಸೇರಿದವರಲ್ಲ. ಆದ್ದರಿಂದ ಇಂತಹ ಸಮೀಕ್ಷೆಯಲ್ಲಿ ಭಾಗವಹಿಸಲ್ಲ” ಎಂದು ಹೇಳಿದ್ದಾರೆ. ಹಾಗೆಯೇ ಸಮೀಕ್ಷೆಯ ನಮೂನೆಯಲ್ಲಿ ಈ ಬಗ್ಗೆ ಕಾರಣ ಬರೆದು ಸಹಿ ಮಾಡಿದ್ದಾರೆ. ದಂಪತಿ ನೀಡಿದ ಈ ಸ್ವಯಂ ದೃಢೀಕರಣ ಪತ್ರವು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆ ನಡೆದಿದೆ.

ಇನ್ನು ಮೂರ್ತಿ ದಂಪತಿ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, “ನಾವು ಯಾರನ್ನೂ ಸಮೀಕ್ಷೆಯಲ್ಲಿ ಭಾಗವಹಿಸಲು ಒತ್ತಾಯಿಸುವುದಿಲ್ಲ. ಇದು ಅವರವರ ಇಚ್ಛೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...