ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ, ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ: ವಿಜಯೇಂದ್ರ

Date:

ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬೆಂಗಳೂರಿನದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್ ಸರಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ” ಎಂದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎತ್ತಿನಹೊಳೆ ಯೋಜನೆ

“ಕಳೆದ ಹಲವಾರು ದಶಕಗಳಿಂದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗಕ್ಕೆ ನೀರು ಕೊಡುವ ಯೋಜನೆ ಇದಾಗಿದೆ. ಇದರ ಆರಂಭದಲ್ಲಿ ಸುಮಾರು 8,500 ಕೋಟಿ ಯೋಜನಾ ವೆಚ್ಚ ಇದ್ದುದು ಈಗ ಅದು 20,22,500 ಕೋಟಿಗೆ ಏರಿದೆ. ಈ ಯೋಜನೆಗೆ ಚಾಲನೆ ನೀಡಿದ್ದು ಸಂತೋಷ; ಆದರೆ, ಅದರ ಮೂಲ ಉದ್ದೇಶ ಈಡೇರಲಿದೆಯೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ” ಎಂದು ಹೇಳಿದರು.

ಸಿಎಂ, ಡಿಸಿಎಂ ಕ್ರೆಡಿಟ್ ವಾರ್

“ಮುಖ್ಯಮಂತ್ರಿಗಳು ಹೋಗುವ ಮುಂಚಿತವಾಗಿಯೇ ನಿನ್ನೆ ದಿನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೂಜೆ ಪುನಸ್ಕಾರ ಮಾಡಿದ್ದನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನ ಅಲುಗಾಡುವ ಸಂದರ್ಭ ಇದಾಗಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇರುವವರು” ಎಂದು ವಿಶ್ಲೇಷಿಸಿದರು.

“ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ; ಎತ್ತಿನಹೊಳೆ ಯೋಜನೆ ಆ ಭಾಗದ ಜನರಿಗೆ ಅನುಕೂಲ ಆಗಬೇಕು. ಅದರಲ್ಲಿ ಪ್ರಾಮಾಣಿಕತೆ ತೋರಿಸಿದರೆ ಸಾಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...