ಸಿಎಂ ಸ್ಥಾನಕ್ಕೆ ಚ್ಯುತಿ ಬಂದಿಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ: ಡಿ ಕೆ ಸುರೇಶ್ ಸ್ಪಷ್ಟನೆ

Date:

‌ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಚ್ಯುತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಕೂಡ ಇದನ್ನು ಸ್ಪಷ್ಟವಾಗಿ ಹೇಳಿದೆ. ಸಿಎಂ ಬದಲಾವಣೆ ಚರ್ಚೆ ಕಾಲಹರಣದ ಮಾತು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಸಿಎಂ ಬದಲಾವಣೆ ಚರ್ಚೆ ವ್ಯರ್ಥ ಪ್ರಯತ್ನ. ಕೆಲವರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರಬಹುದು. ಅದು ಈ ಅವಧಿಯಲ್ಲಿ ಸಾಧ್ಯವಿಲ್ಲ” ಎಂದರು.

“ಕೆಲವರಿಗೆ ಮುಖ್ಯಮಂತ್ರಿ ಆಗುವ ಆಸೆ ಇರಬಹುದು, ಅವರೆಲ್ಲರೂ ಹಿರಿಯ ನಾಯಕರೇ. ಆದರೆ, ಖಾಲಿ ಇಲ್ಲದ ಹುದ್ದೆಗೆ ಪೈಪೋಟಿ ನಡೆಸುವುದು ಸೂಕ್ತವಲ್ಲ. ಎಲ್ಲ ಶಾಸಕರ ಅಭಿಪ್ರಾಯ ಆಧರಿಸಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಎಲ್ಲ ಶಾಸಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಬೆನ್ನಿಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕಾರಣದಲ್ಲಿ ಗೊಂದಲ ಸೃಷ್ಟಿಸಬೇಕು ಎಂದೇ ಕೆಲವರು ಇರುತ್ತಾರೆ. ಗೊಂದಲಗಳಿಂದಲೇ ನಾಯಕರಾಗಬೇಕು ಎಂಬುದು ಅವರ ಆಸೆ. ಕೆಲಸ ಮಾಡಿ ನಾಯಕರಾಗಬೇಕು” ಎಂದು ಸಿಎಂ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿರುವ ಸ್ವಪಕ್ಷದ ನಾಯಕರಿಗೆ ಪರೋಕ್ಷವಾಗಿ ಕುಟುಕಿದರು.

“ಬಿಜೆಪಿಯವರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ರಾಜ್ಯ ಸರ್ಕಾರ ಭದ್ರವಾಗಿದೆ. ಯಾವ ಅನುಮಾನವೂ ಬೇಡ” ಎಂದರು.

ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, “ನಾವ್ಯಾಕೆ ಸಿ ಪಿ ಯೋಗೇಶ್ವರ್ ಅವರಿಗೆ ಮಣೆ ಹಾಕಬೇಕು? ನಮಗೆ ಯೋಗೇಶ್ವರ್ ಅವಶ್ಯಕತೆ ಇಲ್ಲ. ಚನ್ನಪಟ್ಟಣ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಿದ್ದೇವೆ. ಶೀಘ್ರದಲ್ಲಿ ಅಚ್ಚರಿಯ ಅಭ್ಯರ್ಥಿ ಯಾರೂ ಎಂದು ಬಹಿರಂಗವಾಗಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...