ಶಿಗ್ಗಾಂವಿ | ಬಂಡಾಯ ಸಾರಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ಯಶಸ್ವಿ

Date:

ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದ್ದಾರೆ.

ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂ ಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕರೆದುಕೊಂಡು ಬಂದು ಚರ್ಚಿಸಿದರು.

ಇಬ್ಬರು ಮಾಜಿ ಶಾಸಕರಿಂದ ಬಂಡಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಕೊನೆಯ ದಿನ ಕಾಂಗ್ರೆಸ್ ಒಳಗೆ ಬಂಡಾಯ ಭುಗಿಲೆದ್ದಿತ್ತು. ಕಾಂಗ್ರೆಸ್‌ನ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಮತ್ತು ಮಾಜಿ ಶಾಸಕ ಮಂಜುನಾಥ್ ಕುನ್ನೂರು ಬಂಡಾಯ ಸಾರಿ
ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್‌ ಪಡೆಯುವುದು ಪಕ್ಕಾ ಆಗಿದೆ. ಮಂಜುನಾಥ್ ಕುನ್ನೂರು ಅವರ ನಾಮಪತ್ರ ವಾಪಸ್‌ ಪಡೆಯುತ್ತಾರಾ ಕಾದುನೋಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...