ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯನವರಿಗಿದ್ದ ರೋಷಾವೇಶ ಬಿ. ನಾಗೇಂದ್ರ ವಿಚಾರದಲ್ಲಿ ಯಾಕಿಲ್ಲಾ: ಬೊಮ್ಮಾಯಿ ಪ್ರಶ್ನೆ

Date:

ನಮ್ಮ ಸರ್ಕಾರ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಸಚಿವ ಬಿ. ನಾಗೇಂದ್ರ ವಿಚಾರದಲ್ಲಿ ಯಾಕಿಲ್ಲಾ ಎಂದು ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪ್ರಶ್ನಿಸಿದರು.

ಹೊಸಪೇಟೆಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಅವರ ಸಚಿವ ಸಂಪುಟದ ಸಚಿವರ ವ್ಯಾಪ್ತಿಯ ವಾಲ್ಮೀಕಿ ನಿಗಮ್ ಹಣ ಲೂಟಿ ಆಗಿದೆ. 14 ಅಕೌಂಟ್ ಗಳ ಮೂಲಕ ಹಗಲು ದರೊಡೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಡೆತ್ ನೋಟ್ ನಲ್ಲಿ ಎರಡು ಬಾರಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶ ಇತ್ತು ಎಂದು ಉಲ್ಲೇಖ ಮಾಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

“ನೈತಿಕತೆ ಇದ್ದರೆ ಸಿಎಂ ಅವರು ಸಚಿವರ ರಾಜೀನಾಮೆ ತೆಗೆದುಕೊಳ್ಳಲಿ. ಇದೊಂದು ಭ್ರಷ್ಟಾಚಾರ ಕೂಟದ ಸರ್ಕಾರ. ಈ ಪ್ರಕರಣಕ್ಕೂ, ಈಶ್ವರಪ್ಪನವರ ಪ್ರಕರಣಕ್ಕೂ ಹೊಂದಾಣಿಕೆ ಮಾಡುತ್ತಾರೆ, ನಾಚಿಕೆಯಾಗಬೇಕು ಇವರಿಗೆ” ಎಂದರು.

“ಬಹುಕೋಟಿ ಹಗರಣ ಇದು, ಒಂದೇ ದಿನದಲ್ಲಿ 14 ಅಕೌಂಟ್ ಗೆ ಮಾಯ ಆಗುತ್ತದೆ. ಅಂದರೆ ಸಂಶಯಾಸ್ಪದ ಅಕೌಂಟ್ ಗಳಿಗೆ ಹೋಗಿದೆ. ಇದು ಸಿಬಿಐ ಗೆ ಹೋಗುವಂತಹ ಮುಖ್ಯವಾದ ಕೇಸ್. ಒಂದು ಬ್ಯಾಂಕ್ ಮುಖಾಂತರ ಬೇರೆ ರಾಜ್ಯಕ್ಕೆ ಹಣ ಹೋಗಿದೆ. 10 ಕೋಟಿಗೆ ಹೆಚ್ಚು ಹಗರಣ ಅವ್ಯವಹಾರ ಆಗಿದ್ದರೆ,, ಅದು ಸಿಬಿಐ ತನಿಖೆಗೆ ಹೋಗಬೇಕು ಅಂತ ಇದೆ. ಆದರೆ, ಇವರು ಯಾಕೆ ಸಿಬಿಐಗೆ ಕೊಡುತ್ತಿ” ಎಂದು ಪ್ರಶ್ನಿಸಿದರು.

ಕಾನೂನು ಎಲ್ಲರಿಗೂ ಒಂದೆ

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಎಸ್ಐಟಿ ತನಿಖೆಯಾಗುತ್ತಿದೆ, ಪ್ರಕರಣ ತನಿಖೆ ಹಂತದಲ್ಲಿದೆ. ಅಪರಾಧ ಮಾಡಿದವರು, ಶೋಷಣೆ ಮಾಡಿದವರು, ಅದನ್ನು ಪ್ರಚಾರ ಮಾಡಿದವರು ಎಲ್ಲಾ ವಿಚಾರದಲ್ಲಿ ಕಾನೂನು ಇದೆ. ತನಿಖೆ ನಡೆಯುತ್ತಿದೆ, ಕಾನೂನು ಎಲ್ಲರಿಗೂ ಒಂದೇ” ಎಂದರು.

ಕಾನೂನು ಸುವ್ಯವಸ್ಥೆ ಹಾಳಾಗಿದೆ

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ. ನಮ್ಮ ಮಕ್ಕಳು ಶಾಲೆ, ಕಾಲೇಜ್ ಗೆ ಹೋದರೆ ಸುರಕ್ಷಿತವಾಗಿ ವಾಪಾಸ್ ಬರುತ್ತಾರೆ ಅನ್ನುವ ನಂಬಿಕೆ ಇಲ್ಲಾ. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲಾ. ರಾಜ್ಯದಲ್ಲಿ ಸಾಮೂಹಿಕ ಕೊಲೆಗಳು ಆಗುತ್ತಿವೆ. ಒಂದೇ ಸಮಯಕ್ಕೆ ಮೂರು ನಾಲ್ಕು ಜನರ ಕೊಲೆ ಆಗುತ್ತಿವೆ. ಸಮಾಜಘಾತುಕರಿಗೆ ಹೆದರಿಕೆ ಇಲ್ಲಾ, ಅವರಿಗೆ ಪೊಲೀಸ್ ಠಾಣೆಗಳಲ್ಲಿ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಆ ಕಾರಣಕ್ಕೆ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...