ಈಶ್ವರಪ್ಪಗೆ ಮೋದಿ ಕರೆ | ಸೂಡಾನ್‌ನಲ್ಲಿ ಸಿಲುಕಿದ ಬುಡಕಟ್ಟು ಜನರ ಬಗ್ಗೆ ಮೌನ, ಭ್ರಷ್ಟರ ಕುಶಲೋಪರಿ : ಕಾಂಗ್ರೆಸ್ ಕಿಡಿ

Date:

  • ಪ್ರಧಾನಿ ಮೋದಿಯ ಧಮ್ಮು ತಾಕತ್ತು ಕೇಳಿದ ಕಾಂಗ್ರೆಸ್
  • ಗುತ್ತಿಗೆದಾರರ ಸಂಘದ ಜೊತೆಗೆ ಮಾತನಾಡುವಂತೆ ಕುಟುಕು

ಸೂಡಾನ್‌ನಲ್ಲಿ ಸಿಲುಕಿದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಕುರಿತು ಮಾತನಾಡದ ಪ್ರಧಾನಿ ಮೋದಿ ಅವರು ಭ್ರಷ್ಟರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಪ್ರಧಾನಿ ಮೋದಿ ಅವರು ಕೆ ಎಸ್ ಈಶ್ವರಪ್ಪ ಅವರಿಗೆ ಕರೆ ಮಾಡಿ ಮಾತನಾಡಿರುವ ಕುರಿತು ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಬಿಜೆಪಿಯ ಮೋದಿಯವರ ಕಾಲೆಳೆದಿದೆ.

“ಸೂಡಾನ್‌ನಲ್ಲಿ ಸಿಲುಕಿದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದವರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದ ಕ್ರಮಗಳೇನು? ಕೇಂದ್ರ & ರಾಜ್ಯ ಸರ್ಕಾರಗಳು ಏಕೆ ಈ ಬಗ್ಗೆ ಮೌನವಹಿಸಿವೆ? ಭ್ರಷ್ಟರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸುವ ಮೋದಿ ಅವರೇ, ನಮ್ಮ ಜನರನ್ನು ರಕ್ಷಿಸುವಲ್ಲಿ ಆಸಕ್ತಿ ಇಲ್ಲವೇಕೆ? ಬುಡಕಟ್ಟು ಜನರ ಬಗ್ಗೆ ತಾತ್ಸಾರವೇಕೆ?” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?” ಎಂದು ಕಾಂಗ್ರೆಸ್ ಕೇಳಿದೆ.

“ಪ್ರಧಾನಿ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಪ್ರಶ್ನಿಸಿದೆ.

“ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ನರೋಡಾ ಗಾಮ್ ಹತ್ಯೆ ಪ್ರಕರಣ | ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲ ಆರೋಪಿಗಳು ಖುಲಾಸೆ

“ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಕುಶಲ ವಿಚಾರಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ, ಮೋದಿ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ಕುಟುಕಿದೆ.

ಮೋದಿ ಅವರಿಗೆ ಸವಾಲು ಹಾಕಿರುವ ಕಾಂಗ್ರೆಸ್, “ನಿಮಗೆ ದಮ್ಮು, ತಾಕತ್ತು ಇದ್ದರೆ ಒಂದೇ ಒಂದು ಬಾರಿ ಗುತ್ತಿಗೆದಾರರ ಸಂಘದವರೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ PSI ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳೊಂದಿಗೆ ಮಾತನಾಡಿ. ಇದು ನಿಮ್ಮಿಂದ ಸಾಧ್ಯವೇ?” ಎಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...