ಎನ್‌ಜಿಓಗಳ ಮೂಲಕ ಸರಳ ವಿವಾಹ: ಅಲ್ಪಸಂಖ್ಯಾತ ಜೋಡಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ಯೋಜನೆ ಜಾರಿ; ಷರತ್ತುಗಳು ಏನೇನು?

Date:

ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಸರಳ ವಿವಾಹವಾಗುವ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ, ಸಿಖ್ ಜೋಡಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ‌.

ಬಜೆಟ್‌ನಲ್ಲಿ ಘೋಷಿಸಿದಂತೆ ಈ ಯೋಜನೆಯನ್ನು ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವು ಷರತ್ತುಗಳೊಂದಿಗೆ ಜಾರಿಗೊಳಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ‌.

Minority Dept

2025-26ನೇ ಸಾಲಿನ ಆಯವ್ಯಯ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50 ಸಾವಿರ ನೀಡುವ ಬಗ್ಗೆ ಘೋಷಿಸಿದ್ದರು. ಸದ್ಯ ಈ ಯೋಜನೆಗೆ ಮಂಜೂರಾತಿ ದೊರೆತ ಹಿನ್ನೆಲೆಯಲ್ಲಿ, ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಾದ ಜೀಲಾನಿ‌ ಮೊಕಾಶಿಯವರು ಅಧಿಕೃತ ಆದೇಶವನ್ನು ಸಂಪೂರ್ಣ ಷರತ್ತುಗಳ ಜೊತೆಗೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001494204

ಈ ಯೋಜನೆಯ ಫಲಾನುಭವಿಗಳಾಗಬೇಕಾದರೆ ಇರುವ ಷರತ್ತುಗಳು ಏನೇನು?

  1. ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು.
  2. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು.
  3. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.
  4. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರತಕ್ಕದಲ್ಲ.
  5. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ.
  6. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.
  7. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ದೊರೆಯಲಿದೆ.
  8. ಜಿಲ್ಲಾ ನೋಂದಣಿ / ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್‌ಗಳು, ದೇವಸ್ಥಾನದ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
  9. ಸದರಿ ಸಾಮೂಹಿಕ ವಿವಾಹವು ಇತರೆ ಜಿಲ್ಲೆಗಳಲ್ಲಿ ನಡೆದಿದ್ದದಲ್ಲಿ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ದೃಢೀಕರಿಸಬೇಕು.
  10. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
  11. ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೊ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS) (ಸ್ಥಿರ ಚಿತ್ರಗಳನ್ನು ಸಲ್ಲಿಸಬೇಕು)
  12. ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ಪರಿಶೀಲನೆಯ ನಂತರ ಜಿಲ್ಲೆಗೆ ನಿಗದಿಪಡಿಸಲಾಗಿರುವ ಗುರಿಗೆ ತಕ್ಕಂತೆ ಅರ್ಹ ಫಲಾನುಭವಿಗಳ ಪೈಕಿ, ವಿಧವೆ ತಾಯಿಯ ಕುಟುಂಬ/ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆಯ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು.
  13. ಅರ್ಹ ವಧು ವರರಿಗೆ ಮಂಜೂರಾದ ಪ್ರೋತ್ಸಾಹ ಧನವನ್ನು ವಧು ಮತ್ತು ವರನ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆಗೆ ಮಾತ್ರ ಜಮಾ ಮಾಡಲಾಗುವುದು.
  14. ಯಾವುದೇ ತರಹದ ಬಾಲ್ಯ ವಿವಾಹ ಅಥವಾ ಅಪ್ರಾಪ್ತ ವಯಸ್ಸಿನ ವಿವಾಹಗಳು ಜರುಗದಿರುವಂತೆ ಖಾತ್ರಿಪಡಿಸಿಕೊಳ್ಳುವ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ರವರನ್ನು ಈ ಪ್ರಕ್ರಿಯೆಯ ಭಾಗವನ್ನಾಗಿಸತಕ್ಕದ್ದು.
  15. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000ಗಳನ್ನು ನೀಡುವುದು.
  16. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಸದರಿ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ ಮೂರು ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಸಬೇಕು.
  17. ಪ್ರೋತ್ಸಾಹ ಧನ ಪಡೆಯಲು ಮದುವೆ ದಿನಾಂಕದ ಮೂರು ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರ ಕಚೇರಿಗೆ ನಿಗದಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು.
  18. ಈ ಯೋಜನೆಯಲ್ಲಿ ಸರ್ಕಾರದ ಸಹಾಯಧನವನ್ನು ಅನರ್ಹ ಫಲಾನುಭವಿಗಳಿಗೆ ನೀಡಿ ದುರುಪಯೋಗಪಡಿಸಿಕೊಂಡಲ್ಲಿ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯವು ಎಚ್ಚರಿಕೆ ನೀಡಿದೆ.
1001494207
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...