ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ: ಸದಾನಂದಗೌಡ

Date:

ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದ ಒಕ್ಕಲಿಗರ ಕಾರ್ಯಕ್ರಮದಲ್ಲಿ ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನವನ್ನೇ ಕಳೆದುಕೊಂಡೆ. ಅಂದು ನಾನು ಆಡಿದ ಒಂದು ಮಾತು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಹೇಳಿದ್ದಾರೆ.

ದಕ್ಷಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾನು ಮುಖ್ಯಮಂತ್ರಿಯಾದ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ‘ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿ, ಆದಿಚುಂಚನಗಿರಿ ಸ್ವಾಮೀಜಿ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾದೆ’ ಎಂದಿದ್ದೆ. ಆ ಮಾತೇ ನನಗೆ ಮುಳುವಾಯಿತು. ನನಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಪ್ಪಾ ಎಂದು ಪಕ್ಷದ ಹಿರಿಯರು ಹೇಳಿದರು” ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ಹೈಕಮಾಂಡ್‌ಗೆ ಕುಟುಕಿದ್ದಾರೆ.

“ಈಗ ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆಯಿಲ್ಲ. ಹರಕು ನಾಲಿಗೆ, ಹಣ ಹಾಗೂ ಗುಂಪುಗಾರಿಕೆಯ ರಾಜಕೀಯ ನಡೆಯುತ್ತಿದೆ. ಮುಂದೆ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಅಶ್ವತ್ಥ ನಾರಾಯಣ, “ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಸರಿಯಿಲ್ಲ. ಮಕ್ಕಳನ್ನು ಧರ್ಮದ ಆಧಾರದಲ್ಲಿ ವಿಭಜಿಸಲು ಯತ್ನಿಸುತ್ತಿದ್ದಾರೆ. ಮಕ್ಕಳಲ್ಲಿ ವ್ಯತ್ಯಾಸ ಇರಬಾರದು. ಶಾಲೆಯಲ್ಲಿ ಎಲ್ಲ ಮಕ್ಕಳು ಒಂದಾಗಿರಬೇಕು. ಆ ಉದ್ದೇಶದಿಂದ ಸಮವಸ್ತ್ರ ನಿಯಮ ಇರುವುದು” ಎಂದು ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...