ಅತ್ಯಾಚಾರ ಸೇರಿ ಮೂರು ಪ್ರಕರಣದಲ್ಲಿ ಬಿಜೆಪಿ ಶಾಸಕ‌ ಮುನಿರತ್ನಗೆ ಎಸ್‌ಐಟಿ ಕ್ಲೀನ್‌ ಚೀಟ್‌

Date:

ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ‌ ಮುನಿರತ್ನಗೆ ಮೂರು ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ‌ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕ್ಲೀನ್‌ ಚೀಟ್‌ ಸಿಕ್ಕಿದೆ.

ಈ ಮಧ್ಯೆ ಆರ್‌ಎಂಸಿ ಯಾರ್ಡ್ ಪೊಲೀಸರು ದಾಖಲಿಸಿರುವ ಅಪರಾಧದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಮುನಿರತ್ನ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025 ಮೇ 20 ರಂದು 40 ವರ್ಷ ವಯಸ್ಸಿನ ಮಹಿಳೆ ನಗರದ ಆರ್​​ಎಂಸಿ‌ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕ‌ ಮುನಿರತ್ನ ಸೇರಿದಂತೆ ಅವರ ಬೆಂಬಲಿಗರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ‌ ಬಗ್ಗೆ ಆರ್​​ಎಂಸಿ ಯಾರ್ಡ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಿತ್ತು.

ಶಾಸಕ ಮುನಿರತ್ನ ವಿರುದ್ದ ಒಟ್ಟು ಆರು ಕೇಸ್​​ಗಳು ದಾಖಲಾಗಿದ್ದವು. ನಂದಿನಿಲೇಔಟ್ ಠಾಣೆಯಲ್ಲಿ ಮಹಿಳೆಯ ಸೀರೆ ಎಳೆದು ದೌರ್ಜನ್ಯ ಮಾಡಿದ್ದ ಆರೋಪದಡಿ‌ ದೂರು ದಾಖಲಾಗಿದ್ದು, ಈ ಕೇಸ್​​ನಲ್ಲಿಯೂ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ.

ಹಾಗೆಯೇ ಯಶವಂತಪುರದಲ್ಲಿ ಠಾಣೆಯಲ್ಲಿ ದಾಖಲಾಗಿದ್ದ, ಬೆಂಕಿಯಿಟ್ಟು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿಯೂ ಸಹ ಬಿ. ರಿಪೋರ್ಟ್ ಸಲ್ಲಿಕೆಯಾಗಿದೆ. ಇನ್ನುಳಿದ ಮೂರು ಪ್ರಕರಣಗಳಲ್ಲಿ ಎಸ್​​ಐಟಿ ತನಿಖೆ ಮುಂದುವರಿಯಲಿದೆ.

“ಇದು ಸತ್ಯಕ್ಕೆ ಸಂದ ಜಯವಾಗಿದೆ. ಕಂಡವರ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದನ್ನು ಬಿಡಬೇಕು. ಡಿಕೆ ಸುರೇಶ್ ಸೋತ ನಂತರ, ಕುಸುಮಾ ಸೋತ ನಂತರ ನನ್ನ ವಿರುದ್ಧ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗಿವೆ. ಯಾರಿಗೆ ಯಾವುದೂ ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ” ಎಂದು ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...