ಎಸ್‌ಐಟಿ ಅರ್ಜಿ ವಜಾ, ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಆದೇಶ ಎತ್ತಿ ಹಿಡಿದ ಹೈಕೋರ್ಟ್‌

Date:

ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ರದ್ಧತಿ ಕುರಿತು ಎಸ್‌ಐಟಿ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿ ಮಾಡಿದೆ.

ಮಾಜಿ ಸಂಸದ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾದ ಮಹಿಳೆ ಅಪಹರಣ ಮಾಡಿದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಎಚ್‌ ಡಿ ರೇವಣ್ಣಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶ ರದ್ದು ಕೋರಿ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು.

ಆಗಸ್ಟ್‌ 1ರಂದು ವಾದ ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿ‌ಸಿತ್ತು. ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿಯನ್ನು ಕೈಗೆತ್ತಿಕೊಂಡು ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶ ಎತ್ತಿ ಹಿಡಿಯಿತು. ಎಸ್‌ಐಟಿ ಅರ್ಜಿಯನ್ನು ವಜಾ ಮಾಡಿತು. ರೇವಣ್ಣ ಪರವಾಗಿ ವಕೀಲ ಜಿ ಅರುಣ್‌ ವಕಾಲತ್ತು ಹಾಕಿದ್ದರು. ರೇವಣ್ಣ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್‌ ವಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳಿಗೂ ಜಾಮೀನು ಮಂಜೂರು

ಇದೇ ವೇಳೆ ಅಪಹರಣ ಪ್ರಕರಣದ ಇತರೆ ಆರೋಪಿಗಳ ಜಾಮೀನು ಅರ್ಜಿ ಸಹ ವಿಚಾರಣೆಯಾಗಿದೆ. ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಾಸನದ ಸತೀಶ್‌ ಬಾಬು ಅಲಿಯಾಸ್‌ ಸತೀಶ್‌ ಬಾಬಣ್ಣ, ಎಚ್‌ ಕೆ ಸುಜಯ್‌, ಎಚ್‌ ಎನ್‌ ಮಧು, ಎಸ್‌ ಟಿ ಕೀರ್ತಿ, ಎಚ್‌ ಡಿ ಮಾಯು ಗೌಡ, ಕೆ ಎ ರಾಜಗೋಪಾಲ್‌ ಅವರಿಗೆ ಎಲ್ಲರಿಗೂ ಜಾಮೀನು ಮಂಜೂರು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...