ಜೈನಮುನಿ ಹತ್ಯೆಗೆ ಕಾರಣವಾಗಿದ್ದು ಆರು ಲಕ್ಷ ಹಣ, ಕೆಟ್ಟ ಬೈಗುಳ; ಚಾರ್ಜ್​ಶೀಟ್‌ನಲ್ಲಿ ಉಲ್ಲೇಖ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಆರೋಪಿಗಳ ವಿರುದ್ಧ ಬೆಳಗಾವಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

500 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್​ನಲ್ಲಿ ಹತ್ಯೆಗೆ ಕಾರಣವಾದ ಪ್ರಮುಖ ವಿಚಾರ ಬಯಲಾಗಿದೆ. ಹತ್ಯೆಗೆ ಹಣಕಾಸಿನ ವಿಚಾರ ಮಾತ್ರವಲ್ಲ, ಬೈಗುಳವೇ ಹೆಚ್ಚು ಕಾರಣ ಎನ್ನುವ ವಿಚಾರ ಸಿಐಡಿ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದ ಸಂಪೂರ್ಣ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು, ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹುಸೇನ್‌ ಡಾಲಾಯತ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸಿಐಡಿ ಚಾರ್ಜ್​ಶೀಟ್​ನಲ್ಲಿ 10 ಮಂದಿಯನ್ನು ಸಾಕ್ಷ್ಯಾಧಾರಗಳನ್ನಾಗಿಸಿ 164 ಹೇಳಿಕೆಗಳ ಜೊತೆ ಟೆಕ್ನಿಕಲ್ ಎವಿಡೆನ್ಸ್ ಸಂಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೈನ‌ಮುನಿ ಜೊತೆ ಆರೋಪಿ ನಾರಾಯಣ ಮಾಳಿ ಹೆಚ್ಚು ಒಡನಾಟ ಹೊಂದಿದ್ದ ಬಗ್ಗೆ ಸಾಕ್ಷಿಗಳು ನೀಡಿದ ಹೇಳಿಕೆಯನ್ನು ದಾಖಲಿಸಲಾಗಿದೆ. ಆರು ಲಕ್ಷ ಹಣದ ಜೊತೆ ಜೈನ ಮುನಿಗಳು ಆರೋಪಿಯನ್ನ ಹೀಯಾಳಿಸಿ ನಿಂದನೆ ಮಾಡಿದ್ದು ಕೊಲೆಗೆ ಕಾರಣವಾಗಿದೆ.

ಬೈಗುಳದಿಂದ ಕೋಪಗೊಂಡಿದ್ದ ಆರೋಪಿಗಳು ಕಾಮಕುಮಾರ ನಂದಿ ಮಹಾರಾಜರನ್ನು ಕೊಲೆ ಮಾಡಿ ಗುರುತು ಸಹ ಸಿಗದಂತೆ ದೇಹ ತುಂಡರಿಸಿ ಬೋರ್​​ವೆಲ್​ಗೆ ಹಾಕಿದ್ದರು. ತುಂಡರಿಸಲು ಬಳಸಿದ್ದ ಮಚ್ಚು ಮತ್ತು ಚೀಲವನ್ನು ರಾಯಭಾಗದ ಮೇಲ್ಸೇತುವೆ ಬಳಿ ಎಸೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...