ಎಸ್‌.ಎಂ ಕೃಷ್ಣರಿಗೆ ಶ್ರದ್ಧಾಂಜಲಿ: ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ

Date:

ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಬುಧವಾರ (ಡಿ.11) ಎಸ್‌.ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಹೀಗಾಗಿ, ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಡಿಸೆಂಬರ್​ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ನಡೆಸಲು ಸರ್ಕಾರ ಘೋಷಿಸಿದೆ. ಈ ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ಧ್ವಜಸ್ತಂಭದ ಅರ್ಧ ಭಾಗದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ, ಶ್ರದ್ಧಾಂಜಲಿ ಸಲ್ಲಿಸಲು ಸೂಚಿಸಲಾಗಿದೆ.

92 ವರ್ಷದ ಎಸ್‌.ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಕೊನೆಯುಸಿಳೆದಿದ್ದಾರೆ. ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಕಲ ಸರ್ಕಾರಿ ಗೌರವಗಳೊಂದಗಿಎ ಅಂತ್ಯಕ್ರಿಯೆ ನೆರವೇರಿಸುವುದಾಗಿ ಸರ್ಕಾರ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...