ಸಣ್ಣ ಕೈಗಾರಿಕಾ ಸಚಿವ ದರ್ಶನಾಪುರ ಹೆಗಲಿಗೆ ನಾಲ್ಕು ನಿಗಮ ಮಂಡಳಿಗಳ ಹೆಚ್ಚುವರಿ ಜವಾಬ್ದಾರಿ

Date:

  • ಲಿಂಗಾಯತ ಸಮುದಾಯಕ್ಕೆ ನ್ಯಾಯ ನೀಡುವ ಸಲುವಾಗಿ ಹೆಚ್ಚುವರಿ ಹೊಣೆ
  • ಸಚಿವ ‍ಸ್ಥಾನದೊಂದಿಗೆ ಇತರೆ ನಾಲ್ಕು ನಿಗಮ ಮಂಡಳಿಗಳ ಜವಾಬ್ದಾರಿ

ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕಾಂಗ್ರೆಸ್‌ ಸರ್ಕಾರ ಹೆಚ್ಚುವರಿ ಜವಾಬ್ದಾರಿ ಹೆಗಲಿಗೇರಿಸಿದೆ.

ದರ್ಶನಾಪುರ ಅವರಿಗೆ ಹೆಚ್ಚುವರಿ ಅಧ್ಯಕ್ಷ ಸ್ಥಾನ ನೀಡಿರುವುದು ಸಂಪುಟದಲ್ಲಿ ಲಿಂಗಾಯತ ಸಮುದಾಯದ ಪ್ರಾಮುಖ್ಯತೆ ಹೆಚ್ಚಿಸಲು ಎಂದು ಮೂಲಗಳು ತಿಳಿಸಿವೆ.

ಎಂ.ಬಿ. ಪಾಟೀಲ್ ಹೊರತುಪಡಿಸಿದರೆ ಉಳಿದ ಲಿಂಗಾಯತ ಸಚಿವರಿಗೆ ಸಣ್ಣ, ಸಣ್ಣ ಖಾತೆಗಳನ್ನು ನೀಡಿ, ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪದ ನಡುವೆಯೇ ದರ್ಶನಾಪುರ ಅವರಿಗೆ ನಾಲ್ಕು ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿಗಳಿಗೆ ಹಣ ಹೊಂದಿಕೆ ಸರ್ಕಾರ ಸ್ಪಷ್ಟಪಡಿಸಬೇಕು, ಎಲ್ಲರಿಗೂ ತಿಳಿಯುವ ಹಕ್ಕಿದೆ: ಬೊಮ್ಮಾಯಿ

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದರ್ಶನಾಪುರ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

1994, 2004, 2008, 2018, 2023 ರಲ್ಲಿ ಒಟ್ಟು ಐದು ಬಾರಿ ಶಾಸಕರಾಗಿರುವ ದರ್ಶನಾಪುರ ಅವರು, 1994ರಲ್ಲಿ ಇಂಧನ ಸಚಿವ, 2006ರಲ್ಲಿ ಕೃಷಿ ಮಾರುಕಟ್ಟೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...