ಸ್ಮೃತಿ ಇರಾನಿ ಬಗ್ಗೆ ಅವಹೇಳನ ಬೇಡ; ರಾಹುಲ್ ಗಾಂಧಿ ಮನವಿ

Date:

2019ರಲ್ಲಿ ಅಮೇಠಿಯಲ್ಲಿ ತಮ್ಮನ್ನು ಸೋಲಿಸಿದ್ದ ಮತ್ತು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ‘ಅವಹೇಳನ’ ಬೇಡ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಗಾಂಧಿ ಕುಟುಂಬದ ನಿಷ್ಠಾವಂತ ಬೆಂಬಲಿಗ ಕಿಶೋರಿ ಲಾಲ್ ಶರ್ಮಾ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ 1.6 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ.

ಸೋಲುಂಡ ಇರಾನಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಾಂಗ್ರೆಸ್‌ ಕಾರ್ಯಕರ್ತರು ವ್ಯಂಗ್ಯ ಮತ್ತು ನಿಂದನೆಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, “ಗೆಲುವು ಮತ್ತು ಸೋಲುಗಳು ಜೀವನದಲ್ಲಿ ಸಂಭವಿಸುತ್ತವೆ. ಅವಹೇಳನಕಾರಿ ಭಾಷೆಯನ್ನು ಬಳಸುವುದನ್ನು ಮತ್ತು ಶ್ರೀಮತಿ ಸ್ಮೃತಿ ಇರಾನಿ ಬಗ್ಗೆ ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸುವಂತೆ ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ” ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸೋಲಿನ ಕಾರಣಕ್ಕೆ ಇರಾನಿ ಅಥವಾ ಬೇರೆ ಯಾವುದೇ ನಾಯಕರನ್ನು ಅವಮಾನಿಸುವುದು ಮತ್ತು ನಿಂದಿಸುವುದು ದೌರ್ಬಲ್ಯದ ಸಂಕೇತವೇ ಹೊರತು, ಶಕ್ತಿಯ ಸಂಕೇತವಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯ ದ್ವೇಷ ರಾಜಕಾರಣದ ಬಗ್ಗೆ ಹಿಂದಿನಿಂದಲೂ ಮಾತನಾಡುತ್ತಲೇ ಬಂದಿರುವ ರಾಹುಲ್‌ ಗಾಂಧಿ, ‘ಮೊಹಬ್ಬತ್ ಕಿ ದುಕಾನ್’ (ಪ್ರೀತಿಯ ಅಂಗಡಿ) ತೆರೆಯಲು ಬಯಸುವುದಾಗಿ ಪದೇ ಪದೇ ಹೇಳಿದ್ದಾರೆ. ದ್ವೇಷವನ್ನು ತೊಡೆಯಬೇಕು ಎಂದಿದ್ದಾರೆ.

 

2024ರಲ್ಲಿ ಗಾಂಧಿ ಕುಟುಂಬದ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಮತ್ತೊಂದು ಭದ್ರಕೋಟೆ ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು.

ಆದರೆ, ವಯನಾಡ್‌ ಮತ್ತು ರಾಯ್‌ ಬರೇಲಿಯಲ್ಲಿ ಸ್ಪರ್ಧಿಸಿದ ರಾಹುಲ್‌ ಗಾಂಧಿ, ಅಮೇಥಿಯಲ್ಲಿ ತಮ್ಮ ಕುಟುಂಬದ ಬೆಂಬಲಿಗ ಕಿಶೋರಿ ಲಾಲ್ ಶರ್ಮಾ ಅವರನ್ನು ಇರಾನಿ ವಿರುದ್ಧ ಅಮೇಥಿಯಲ್ಲಿ ಕಣಕ್ಕಿಳಿಸಿದ್ದರು. ಆಗ, ರಾಹುಲ್‌ ಗಾಂಧಿ ಅಮೇಥಿಯಿಂದ ಓಡಿ ಹೋಗಿದ್ದಾರೆ ಎಂದು ಇರಾನಿ ವ್ಯಂಗ್ಯವಾಡಿದ್ದರು.

ಆದರೆ, ಅಮೇಥಿಯಲ್ಲಿನ ಸೋಲು ಇರಾನಿಗೆ ಆಘಾತವನ್ನುಂಟುಮಾಡಿತು. “ಜೀವನ ಹೀಗಿದೆ… ನನ್ನ ಜೀವನದ ಒಂದು ದಶಕವು ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಹೋಗುವುದು, ಜೀವನವನ್ನು ಕಟ್ಟುವುದು, ಭರವಸೆ ಮತ್ತು ಆಕಾಂಕ್ಷೆಗಳನ್ನು ಬೆಳೆಸುವುದು, ಮೂಲಭೂತ ಸೌಕರ್ಯಗಳನ್ನು – ರಸ್ತೆಗಳು, ನಾಲೆ, ಬೈಪಾಸ್, ವೈದ್ಯಕೀಯ ಕಾಲೇಜು ಮತ್ತು ಹೆಚ್ಚಿನವು – ಒದಗಿಸುವುದು. ನನ್ನ ಬೆಂಬಲಕ್ಕೆ ನಿಂತವರಿಗೆ ನಾನು ಕೃತಜ್ಞನಾಗಿದ್ದೇನೆ. ಕೆಲವರು ಜೋಶ್‌ ಹೇಗಿದೆ ಎಂದು ಪ್ರಶ್ನಿಸುತ್ತಿದ್ದಾರೆ. ನಾನ್ನ ಉತ್ತರ ಹೀಗಿದೆ- ಜೋಶ್‌ ಈಗಲೂ ಹೆಚ್ಚಿನದ್ದಾಗಿದೆ ಸರ್'” ಎಂದು ಇರಾನಿ ಟ್ವೀಟ್‌ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...