ವಿದ್ಯಾರ್ಥಿನಿ ಬರೆದ ಸಾಮಾಜಿಕ ಕಳಕಳಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Date:

ಎರಡನೇ ಬಾರಿಗೆ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿ ಮತ್ತು ಸಾಮಾಜಿಕ ಕಳಕಳಿಯ ಅಂಶದೊಂದಿಗೆ ಪತ್ರ ಬರೆದಿದ್ದ 8ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.

ಕೊಪ್ಪಳದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ಶ್ರೆಯಾಂಕ ವಿ ಮೆಣಸಗಿ ಎಂಬ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನಾ ಪತ್ರ ಬರೆದಿದ್ದರು. ಇದಕ್ಕೆ ಸಿಎಂ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೇ 29 ರಂದು ಕೊಪ್ಪಳದ ಮಾಸ್ತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ಮೆಣಸಿಗೆ ಪತ್ರ ಬರೆದು ಅಭಿನಂದಿಸಿದ್ದರು.‌ “ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗುತ್ತಿದ್ದೀರಿ. ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮ, ಕಳಂಕ ರಹಿತ ಆಡಳಿತ ನೀಡಿ. ಬಡವರು, ದೀನದಲಿತರ ಆಶಾಕಿರಣವಾಗಿರೋ ತಮಗೆ ಅಭಿನಂದನೆಗಳು” ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಿದ್ಯಾರ್ಥಿನಿ ಪತ್ರ

“2013 ರಿಂದ 18 ರವೆಗೆ ಕಳಂಕ ರಹಿತ ಆಡಳಿತ ನೀಡಿ ಭೇಷ್ ಎನ್ನಿಸಿಕೊಂಡಿದ್ದೀರಿ, ಮತ್ತೊಮ್ಮೆ ರಾಜ್ಯದ ಜನಮೆಚ್ಚಿದ ನಾಯಕರಾಗಿ ಹೊರಹೊಮ್ಮಿ. ಈ ಬಾರಿಯೂ ಜನಮೆಚ್ಚುವ ಕೆಲಸ‌ ಮಾಡಿ” ಎಂದು ಶುಭ ಹಾರೈಸಿದ್ದರು.

ಈ ಸುದ್ದಿ ಓದಿದ್ದೀರಾ? ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ

ಬಾಲಕಿ ಪತ್ರ ಸಿಎಂ ಸಿದ್ದರಾಮಯ್ಯ ಕಚೇರಿಗೆ ತಲುಪುತ್ತಿದ್ದಂತೆ. ಪುಟ್ಟ ಬಾಲಕಿಯ ಪತ್ರ ಓದಿರುವ ಸಿಎಂ ಸಿದ್ದರಾಮಯ್ಯ ಖುದ್ದು ತಾವೇ ಬಾಲಕಿಗೆ ಪತ್ರ ಬರೆದು ಶುಭ ಹಾರೈಸಿದ್ದಾರೆ. “ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. ಚಿಕ್ಕ ವಯಸ್ಸಿನಲ್ಲೆ ನಿನಗಿರೋ ಸಾಮಾಜಿಕ ಕಾಳಜಿ ಮೆಚ್ಚುವಂತದ್ದು. ಜೀವನದಲ್ಲಿ ಶ್ರದ್ದೆಯಿಂದ ವಿದ್ಯೆ ಕಲಿತು ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡು” ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವುದಕ್ಕೆ ವಿದ್ಯಾರ್ಥಿನಿ ಖುಷಿ ಪಟ್ಟಿದ್ದಾರೆ. ಹಾಗೆಯೇ ಪಾಲಕರೂ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...