ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವ ಸೋನಿಯಾ ಗಾಂಧಿ: ಮಾಹಿತಿ ನೀಡಿದ ಆಸ್ಪತ್ರೆ

Date:

ಉದರ ಸಂಬಂಧಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಸದ್ಯ ಅವರ ಡಿಸ್ಚಾರ್ಜ್‌ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸೋನಿಯಾ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಮಂಗಳವಾರ ತಿಳಿಸಿದೆ.

ಭಾನುವಾರ ಸಂಜೆ 78 ವರ್ಷದ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದಕ್ಕೂ ಕೆಲವು ದಿನಗಳ ಮುನ್ನ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಶಿಮ್ಲಾದಲ್ಲೂ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನು ಓದಿದ್ದೀರಾ? ಆರೋಗ್ಯದಲ್ಲಿ ಏರುಪೇರು: ಶಿಮ್ಲಾದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಆಸ್ಪತ್ರೆಯ ಅಧ್ಯಕ್ಷ ಅಜಯ್ ಸ್ವರೂಪ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಉದರ ಸೋಂಕು ಕಾಣಿಸಿಕೊಂಡಿತ್ತು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಆಹಾರ ಪದ್ಧತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ” ಎಂದು ತಿಳಿಸಿದ್ದಾರೆ.

ಇನ್ನು ಡಾ. ಎಸ್. ನುಂದಿ ಮತ್ತು ಡಾ. ಅಮಿತಾಭ್ ಯಾದವ್, ಸೋನಿಯಾ ಅವರ ಆರೋಗ್ಯ ಮತ್ತು ಆಹಾರ ಪದ್ಧತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜೂನ್ 9ರಂದು ಅದೇ ಆಸ್ಪತ್ರೆಗೆ ಸೋನಿಯಾ ದಾಖಲಾಗಿದ್ದರು ಎಂದು ಹೇಳಲಾಗಿದೆ. ಅದಕ್ಕೂ ಮುನ್ನ ಶಿಮ್ಲಾದಲ್ಲಿ ರಕ್ತದೊತ್ತಡ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...