ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

Date:

ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಸಂಸದರ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ನಡೆಯುತ್ತಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿದರು.

ಪಕ್ಷದ ಮುಖಂಡರಾದ ಗೌರವ್ ಗೊಗೋಯ್, ತಾರಿಕ್ ಅನ್ವರ್, ಕೆ ಸುಧಾಕರನ್ ಅವರು ಪ್ರಸ್ತಾವನೆಯನ್ನು ಅನುಮೋದಿಸಿದರು. ಆ ಮೂಲಕ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಮರು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನವಾಗಿ ಸಂಸದರಾಗಿ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ, “ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆ ನಿಜವಾಗಿಯೂ ಐತಿಹಾಸಿಕ ಚಳವಳಿಗಳಾಗಿತ್ತು. ಈ ಎರಡು ಚಳವಳಿಯು ನಮ್ಮ ಪಕ್ಷವನ್ನು ಎಲ್ಲಾ ಹಂತಗಳಲ್ಲಿ ಪುನರುಜ್ಜೀವನಗೊಳಿಸಿತು. ಪ್ರಬಲ ಮತ್ತು ದುರುದ್ದೇಶಪೂರಿತ ತಂತ್ರದ ವಿರುದ್ಧವಾಗಿ ಕಾಂಗ್ರೆಸ್ ಮತ್ತೊಮ್ಮೆ ತನ್ನ ಛಲ ಪ್ರದರ್ಶಿಸಿದೆ” ಎಂದು ಹೇಳಿದರು.

ಈ ನಡುವೆ ಇಂದು ಬೆಳಗ್ಗೆ ದೆಹಲಿಯಲ್ಲಿ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ಕೂಡ ನಡೆಸಲಾಗಿದ್ದು, ಈ ಸಭೆಯಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದೆ.

“ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...