ಸೋನಿಯಾ, ರಾಹುಲ್ ಗಾಂಧಿ 2,000 ಕೋಟಿ ರೂ. ಕಬಳಿಸಲು ಬಯಸಿದ್ದರು: ಇಡಿ

Date:

ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್)ನ 2,000 ಕೋಟಿ ರೂ. ಹಣ-ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶ ವಿಶಾಲ್‌ ಗೋಗ್ನೆ ಅವರ ಮುಂದೆ ತನಿಖಾ ವರದಿಯನ್ನು ಇಡಿ ಸಲ್ಲಿಸಿದೆ. ಇಡಿ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಸ್ಥಾಪಿಸಲು ಪಿತೂರಿ ನಡೆಸಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯಿಂದ (ಎಐಸಿಸಿ) 90 ಕೋಟಿ ರೂ. ಸಾಲವನ್ನು ಪಡೆದ ಎಜೆಎಲ್‌ನ ಆಸ್ತಿಗಳನ್ನು ಕಬಳಿಸುವುದೇ ಹೊಸ ಕಂಪನಿ ಸ್ಥಾಪನೆಯ ಉದ್ದೇಶವಾಗಿತ್ತು. ಈ ಕಂಪನಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 76%ರಷ್ಟು ಶೇರುಗಳನ್ನು ಹೊಂದಿದ್ದರು” ಎಂದು ಆರೋಪಿಸಿದ್ದಾರೆ.

“ಎಜೆಎಲ್ ಲಾಭ ಗಳಿಸುತ್ತಿರಲಿಲ್ಲ. ಆದರೆ, 2,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿತ್ತು. ಆದಾಗ್ಯೂ, ಸಂಸ್ಥೆಯು ತಮ್ಮ ದೈನಂದಿನ ವ್ಯವಹಾರಗಳನ್ನು ನಿರ್ವಹಿಸುವುದು ಕಷ್ಟಕರವಾಗಿತ್ತು. ಎಐಸಿಸಿಯಿಂದ 90 ಕೋಟಿ ರೂಪಾಯಿ ಸಾಲವನ್ನು ಪಡೆಯಲಾಗಿತ್ತು. ‘ಅವರು (ಎಜೆಎಲ್) ನಾವು ನಿಮಗೆ (ಎಐಸಿಸಿ) ಮರುಪಾವತಿಸಲು ಸಾಧ್ಯವಿಲ್ಲ’ವೆಂದು ಹೇಳಿಕೊಂಡಿದ್ದರು. ಸಾಮಾನ್ಯವಾಗಿ, ಯಾವುದೇ ವಿವೇಕಯುತ ವ್ಯಕ್ತಿ ಮರುಪಾವತಿ ಮಾಡಲಾಗದ ಸಂಸ್ಥೆಗೆ 90 ಕೋಟಿ ರೂ. ಸಾಲ ಕೊಡಲು ಸಾಧ್ಯವೇ? ಇದು ಮಕ್ಕಳ ಆಟವೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಂಗ್ ಇಂಡಿಯನ್ ಕಂಪನಿಯನ್ನು 90 ಕೋಟಿ ರೂಪಾಯಿ ಸಾಲಕ್ಕೆ ಬದಲಾಗಿ 2,000 ಕೋಟಿ ರೂಪಾಯಿಗಳ ಎಜೆಎಲ್‌ ಆಸ್ತಿಯನ್ನು ಕಸಿದುಕೊಳ್ಳಲು ರಚಿಸಲಾಗಿತ್ತು. ಸೋನಿಯಾ ಮತ್ತು ರಾಹುಲ್ ಗಾಂಧಿ ಈ 2,000 ಕೋಟಿ ರೂಪಾಯಿ ಮೌಲ್ಯದ ಎಜೆಎಲ್‌ ಕಂಪನಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದರು. ರಾಹುಲ್ ಗಾಂಧಿ ಅವರು ಯಂಗ್ ಇಂಡಿಯನ್ ನಿರ್ದೇಶಕರಾಗಿ ನೇಮಕಗೊಂಡ ಆರು ದಿನಗಳಲ್ಲಿ, ಸಾಲವನ್ನು ಮರುಪಾವತಿಸಲು ಅಥವಾ ಅದನ್ನು ಈಕ್ವಿಟಿಯಾಗಿ ಪರಿವರ್ತಿಸಲು ಎಜೆಎಲ್‌ಗೆ ಪ್ರತಿನಿಧಿಗಳನ್ನು ಕಳಿಸಲಾಗಿತ್ತು” ಎಂದು ರಾಜು ಆರೋಪಿಸಿದ್ದಾರೆ.

ರಾಜು ಅವರ ವಾದವನ್ನು ಆಲಿಸಿದ ನ್ಯಾಯಾಧೀಶರು, “ಸಾರ್ವಜನಿಕ ವಲಯದ ಬ್ಯಾಂಕುಗಳಂತೆಯೇ ಎಐಸಿಸಿ ಕೂಡ ಎಜೆಎಲ್‌ನ ಸಾಲವನ್ನು ಮನ್ನಾ ಮಾಡುವ ಸಾಧ್ಯತೆಗಳಿವೆಯೇ” ಎಂದು ಪ್ರಶ್ನಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

ಉತ್ತರಿಸಿದ ರಾಜು, “ಬ್ಯಾಂಕುಗಳು ಮೇಲಾಧಾರವಾಗಿ ಆಸ್ತಿಗಳನ್ನು ಪಡೆಯದೇ ಸುಸ್ತಿದಾರರ ಸಾಲಗಳನ್ನು ಮನ್ನಾ ಮಾಡುತ್ತವೆ. ಆದರೆ, ಈ ಸಂದರ್ಭದಲ್ಲಿ ಎಜೆಎಲ್ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು, ಅವುಗಳನ್ನು ಅವರು ಕೇವಲ 90 ಕೋಟಿ ರೂ. ಸಾಲಕ್ಕಾಗಿ ಬಿಟ್ಟುಕೊಟ್ಟುಕೊಟ್ಟಿದ್ದಾರೆ. ಈ ವಹಿವಾಟುಗಳಿಂದ ತಲೆದೂರಬಹುದಾದ ಸಮಸ್ಯೆಗಳಿಂದ ತಪ್ಪಿಸಲು ಎಐಸಿಸಿ ನೇರ ವಹಿವಾಟಿನಿಂದ ದೂರ ಉಳಿದಿತ್ತು. ಬದಲಾಗಿ, ಯಂಗ್ ಇಂಡಿಯನ್ ಕಂಪನಿಯನ್ನು ಹುಟ್ಟುಹಾಕಲಾಯಿತು” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇತರರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ 3 (ಹಣಕಾಸು ಲಾಂಡರಿಂಗ್) ಮತ್ತು 4 (ಹಣಕಾಸು ಲಾಂಡರಿಂಗ್‌ಗೆ ಶಿಕ್ಷೆ) ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದೆ. ಪ್ರಕರಣದಲ್ಲಿ, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಹಾಗೂ ಯಂಗ್ ಇಂಡಿಯನ್ ಜೊತೆಗೆ ಸಂಬಂಧ ಹೊಂದಿದ್ದರೆಂದು ಹೇಳಲಾದ ದಿವಂಗತ ಕಾಂಗ್ರೆಸ್ ನಾಯಕ ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಅವರನ್ನೂ ಇಡಿ ಆರೋಪಿಗಳನ್ನಾಗಿ ಹೆಸರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...