ದಕ್ಷಿಣ ಕನ್ನಡ | ಬಿಜೆಪಿ ಶಾಸಕ ಹರೀಶ್‌ ಪೂಂಜಾಗೆ ಗ್ರಾಮಸ್ಥರ ತರಾಟೆ; ಗ್ರಾಮಸ್ಥರನ್ನೇ ನಿಂದಿಸಿದ ಶಾಸಕ

Date:

ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ರೈತರು ತರಾಟೆ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಬಿರುಕು ಬಿಟ್ಟಿದ್ದು, ವಾಸಹ ಸಂಚಾರಕ್ಕೆ ಅಡ್ಡಿಯಾಗಿದೆ. ರಸ್ತೆ ಬಿರುಕು ಬಿಟ್ಟು, ಹಲವಾರು ದಿನಗಳೇ ಕಳೆದಿದ್ದು, ಗ್ರಾಮಕ್ಕೆ ಶಾಸಕ ಹರೀಶ್ ಪೂಂಜಾ ಶನಿವಾರ ಭೇಟಿ ನೀಡಿದ್ದಾರೆ. ತಡವಾಗಿ ಗ್ರಾಮಕ್ಕೆ ಬಂದ ಪೂಂಜಾ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರನ್ನೇ ಪೂಂಜಾ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಶಾಸಕರನ್ನು ಯಾಕೆ ತಡವಾಗಿ ಬಂದೆ ಎಂದು ಪ್ರಶ್ನಿಸುವ ಹಕ್ಕು ನಿಮಗಿಲ್ಲ” ಎಂದಿರುವ ಪೂಂಜಾ, ಗ್ರಾಮಸ್ಥರು ನಾಯಿ ಎಂದು ಅವಾಚ್ಯವಾಗಿ ನಿಂದಿದ್ದಾರೆ ಎಂದು ವರದಿಯಾಗಿದೆ. ಪೂಂಜಾ ವರ್ತನೆಯಿಂದಾಗಿ ಗ್ರಾಮಸ್ಥರು ಮತ್ತು ಬಿಜೆಪಿಗರ ನಡುವೆ ಚಕಮಕಿ ನಡೆದಿದೆ. ಗ್ರಾಮಸ್ಥರ ಆಕ್ರೋಶದಿಂದ ಕಂಗಾಲಾದ ಪೂಂಜಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಹಾಗೆ, ಮೊನ್ನೆಯಷ್ಟೇ ನಡೆದ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಸ್ವಾತಂತ್ರ್ಯ ಹೋರಾಟವನ್ನು ಇದೇ ಬಿಜೆಪಿ ಶಾಸಕ ಹರೀಶ್ ಪೂಜಾ ಟೀಕೆ ಮಾಡಿದ್ದರು. “ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ಯ್ರ ಬಂದಿಲ್ಲ” ಎಂದು ಹೇಳುವ ಮೂಲಕ ಮಹಾತ್ಮ ಗಾಂಧಿ ಅವರನ್ನು ನಿಂದಿಸಿದ್ದರು. ಗಾಂಧಿ ಅವರ ಹೋರಾಟವನ್ನು ಟೀಕಿಸಿದ್ದರು. ಈ ಕಾರಣಕ್ಕಾಗಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...