ತೆರಿಗೆ ಅನ್ಯಾಯದ ವಿರುದ್ಧ ದಕ್ಷಿಣದ ರಾಜ್ಯಗಳು ಧ್ವನಿ ಎತ್ತುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆ ಕೊಟ್ಟರೆ, ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ರೂ. ಮಾತ್ರ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು.

“ನಮಗೆ 11,495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ. ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ” ಎಂದರು.

“ವೇತನ‌ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...