ಕ್ಷೇತ್ರ ಪುನರ್ ವಿಂಗಡಣೆ | ದಕ್ಷಿಣ ರಾಜ್ಯಗಳಿಗೆ ನ್ಯಾಯಯುತ ಪಾಲು, ಒಂದು ಸ್ಥಾನವೂ ಕಡಿಮೆಯಾಗಲ್ಲ: ಅಮಿತ್ ಶಾ

Date:

ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಕ್ಷೇತ್ರ ಪುನರ್‌ ವಿಂಗಡನೆ ಮಾಡುವಾಗ ದಕ್ಷಿಣ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗಲಿದೆ. ಒಂದು ಸ್ಥಾನವೂ ಕೂಡಾ ಕಡಿಮೆಯಾಗಲ್ಲ” ಎಂದು ತಿಳಿಸಿದ್ದಾರೆ.

ಕ್ಷೇತ್ರ ಪುನರ್ ವಿಂಗಡನೆ ಮಾಡುವುದರಿಂದಾಗಿ ತಮಿಳುನಾಡಿನಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಬಹುದು. ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಿದರೆ ನಮ್ಮ ಜನಸಂಖ್ಯೆ ಕಡಿಮೆ ಇರುವುದರಿಂದ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳುತ್ತದೆ. ಇದರಿಂದ ಸಂಸತ್ತಿನಲ್ಲಿ ತಮಿಳುನಾಡು ಪ್ರಾತಿನಿಧ್ಯ ಕಳೆದುಕೊಳ್ಳಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಟ್ಟಿನಲ್ಲಿ ಸ್ಟಾಲಿನ್ ಮಾರ್ಚ್ 5ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಗೆ ಸುಮಾರು 40 ರಾಜಕೀಯ ಪಕ್ಷಗಳನ್ನು ಕರೆಯಲಾಗಿದೆ. ಪ್ರಸ್ತುತ ತಮಿಳುನಾಡು 39 ಸಂಸದರನ್ನು ಹೊಂದಿದೆ. ಆದರೆ ಜನಗಣತಿಯ ಆಧಾರದಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಿದರೆ ಸಂಸದರ ಸಂಖ್ಯೆ 31ಕ್ಕೆ ಇಳಿಯಬಹುದು

ಈ ಬಗ್ಗೆ ಕೊಯಮತ್ತೂರು, ತಿರುವಣ್ಣಾಮಲೈ ಮತ್ತು ರಾಮನಾಥಪುರಂನಲ್ಲಿ ಬಿಜೆಪಿ ಕಚೇರಿಗಳ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಕ್ಷೇತ್ರ ಪುನರ್ ವಿಂಗಡನೆ ಸಂದರ್ಭದಲ್ಲಿ ದಕ್ಷಿಣ ರಾಜ್ಯಗಳಿಗೆ ಯಾವುದೇ ನಷ್ಟವಾಗದಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು.

“ತಮಿಳುನಾಡಿನಲ್ಲಿ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಆದ್ದರಿಂದಾಗಿ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್ ವಿಜಯ್‌ರ ಟಿವಿಕೆ ಸೇರ್ಪಡೆ

“ಸ್ಟಾಲಿನ್ ಅವರೇ ಅನುಪಾತದ ಆಧಾರದ ಮೇಲೆ ಮಾಡಲಾಗುವುದು, ಇದರಿಂದ ಒಂದು ಕ್ಷೇತ್ರವು ಕಡಿಮೆಯಾಗದು ಎಂದು ಮೋದಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ದಕ್ಷಿಣ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗಲಿದೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ” ಎಂದು ತಿಳಿಸಿದ್ದಾರೆ.

“ಸ್ಟಾಲಿನ್ ತಮಿಳುನಾಡು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ತಪ್ಪು ಮಾಹಿತಿ ನೀಡಿ ಜನರನ್ನು ಕ್ಷೇತ್ರ ಪುನರ್ ವಿಂಗಡನೆ ವಿಚಾರದಲ್ಲಿ ಸ್ಟಾಲಿನ್ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನನಗೆ ಈ ಬಗ್ಗೆ ಪ್ರತಿಕ್ರಿಯೆ ಬೇಕು. ನೀವು ಯಾಕೆ ಈ ರೀತಿ ಸುಳ್ಳು ಹೇಳುತ್ತಿದ್ದೀರಿ” ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಈಗಾಗಲೇ ಹಲವು ವಿಚಾರಗಳ ವಾಕ್ಸಮರ ನಡೆಯುತ್ತಲೇ ಇದೆ. ಹಿಂದಿ ಹೇರಿಕೆ, ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ವಿಚಾರದಲ್ಲಿ ಶೀತಲ ಸಮರ ನಡೆಯುತ್ತಿದೆ. ಇದೀಗ ಕ್ಷೇತ್ರ ಪುನರ್‌ ವಿಂಗಡಣೆ ವಿಚಾರದಲ್ಲಿಯೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ವಾಕ್ಸಮರ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...