ಬಿತ್ತನೆ ಬೀಜ ದುಬಾರಿ | ನಮ್ಮ ಸರ್ಕಾರ ಬಂದ ಮೇಲೆಯೇ ಈ ಪ್ರಕ್ರಿಯೆ ನಡೆದಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Date:

“ಆಹಾರ ಧಾನ್ಯಗಳ‌ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹೀಗಾಗಿ ನಾವು ಬಿತ್ತನೆ ಬೀಜಕ್ಕೆ ಶೇ.30 ದರ ಏರಿಸಿದ್ದೇವೆ” ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬಿತ್ತನೆ ಬೀಜ ದುಬಾರಿ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಜೆಡಿಎಸ್‌, ‘ಬಿತ್ತನೆ ಬೀಜ ದುಬಾರಿ, ಕೃಷಿ ಸಚಿವರೇ ಎಲ್ಲಿದ್ದೀರಪ್ಪ?’ ಎಂದು ಕಾಲೆಳೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, “ರಾಜ್ಯದಲ್ಲಿ ಬಿತ್ತನೆ ಬೀಜ ದರ ಹೆಚ್ಚಳದ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ಬೆಲೆ ಹೆಚ್ಚಳಕ್ಕೆ ಕೆಲವು ಕಾರಣಳಿದ್ದು ಅವುಗಳನ್ಮು ನಾವು ಗಮನಿಸಬೇಕು” ಎಂದಿದ್ದಾರೆ.

“2023 -24 ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ. ಖರೀದಿ, ಗುಣಮಟ್ಟ ನಿಯಂತ್ರಣ, ಸಂಸ್ಕರಣೆ, ಪ್ರಯೋಗಾಲಯದಲ್ಲಿ ಪರೀಕ್ಷೆ, ಗ್ರೇಡಿಂಗ್, ದಾಸ್ತಾನು ಮಾಡುವುದು, ಸಾಗಾಟ, ಬೀಜ ಪ್ರಮಾಣೀಕರಣ, ಕಾರ್ಮಿಕರ ಕೂಲಿ‌ ಹಣ ಎಲ್ಲಾ ಸೇರಿಸಿ ಬಿತ್ತನೆ ಬೀಜದ ಮಾರಾಟ ದರ ನಿಗದಿಯಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿತ್ತನೆ ಬೀಜವನ್ನು ಸರ್ಕಾರ ‌ಹಾಗೂ ಖಾಸಗಿ ಸಂಸ್ಥೆಗಳು ನೇರವಾಗಿ ರೈತ ಬೀಜೋತ್ಪಾದಕರಿಂದ ಖರೀದಿಸುತ್ತಿವೆ. ಬೆಲೆ ಹೆಚ್ಚಳದ ಲಾಭವೂ ಬೀಜ ಉತ್ಪಾದಕರಿಗೇ ವರ್ಗಾವಣೆ ಆಗುತ್ತಿದೆ. ಇದು ನಮ್ಮ ಸರ್ಕಾರ ಬಂದ ನಂತರ ಮಾಡಿರುವ ಖರೀದಿ‌ ಮಾರಾಟ ಪ್ರಕ್ರಿಯೆ ಅಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಅನುಸರಿಸಲಾದ ಕ್ರಮ ಮುಂದುವರೆಸಿದ್ದೇವೆ” ಎಂದು ವಿವರಿಸಿದ್ದಾರೆ.

ಯಾವಾಗ ಬೇಕಿದ್ದರೂ ಸಂಪರ್ಕಕ್ಕೆ ಸಿಗುತ್ತೇನೆ
“ನೆರೆಯ ಮಹಾರಾಷ್ಟ್ರದಲ್ಲಿಯೂ ನಮ್ಮ ರಾಜ್ಯಕ್ಕಿಂತ ಹೆಚ್ಚಿನ ದರ ನಿಗದಿ ಮಾಡಲಾಗಿದೆ ರಾಜ್ಯದಲ್ಲಿ ಅತೀ ಹೆಚ್ಚು ಬೆಳೆಯುವ ಶೇಂಗಾದ ಬಿತ್ತನೆ ಬೀಜದ ಬೆಲೆ ಶೇ.1 ಮಾತ್ರ ಏರಿಕೆಯಾಗಿದೆ. ಹಾಗೇ ಸೋಯಾಬೀನ್ ಬಿತ್ತನೆ ಬೀಜದ ಮಾರಾಟ ದರ ಶೇ.8 ಇಳಿಕೆಯಾಗಿದೆ. ರೈತರ ಹಿತ ನಮ್ಮ ಆದ್ಯತೆ. ಜೆಡಿಎಸ್‌ನ ಕಾಳಜಿಯ ನುಡಿಗೆ ಧನ್ಯವಾದಗಳು. ನಾನು‌ ಇಲ್ಲೇ ಕರ್ನಾಟಕ ರಾಜ್ಯದಲ್ಲೇ ಇದ್ದೇನೆ. ಯಾವಾಗ ಬೇಕಿದ್ದರೂ ಸಂಪರ್ಕಕ್ಕೆ ಸಿಗುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...