ವೋಟ್ ಜಿಹಾದ್ ಮಾಡುವವರಿಗೆ ಜನರ ಆಸ್ತಿಯನ್ನ ಎಸ್‌ಪಿ, ಕಾಂಗ್ರೆಸ್‌ ಹಂಚುತ್ತವೆ: ಪ್ರಧಾನಿ ಮೋದಿ

Date:

ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜನರ ಮತಗಳನ್ನು ಪಡೆಯುತ್ತವೆ. ಬಳಿಕ, ‘ವೋಟ್ ಜಿಹಾದ್’ ನಡೆಸುವವರಿಗೆ ಜನರ ಆಸ್ತಿಯನ್ನು ಉಡುಗೊರೆಯಾಗಿ ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೊಂದು ಸುಳ್ಳು ಆರೋಪ ಮಾಡಿದ್ದಾರೆ.

ಉತ್ತರ ಪ್ರದೇಶದ ಹಮಿರ್‌ಪುರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮೋದಿ ತಮ್ಮ ದ್ವೇಷ ಭಾಷಣವನ್ನು ಮುಂದುವರೆಸಿದ್ದಾರೆ. ಮತ್ತೆ, ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ವಿರುದ್ಧ ಸುಳ್ಳಿನ ದಾಳಿ ನಡೆಸಿದ್ದಾರೆ.

“ಇಂದು ನಾನು ಎಸ್‌ಪಿ ಮತ್ತು ಕಾಂಗ್ರೆಸ್ ವಿರುದ್ಧ ಎಚ್ಚರಿಕೆ ನೀಡಲು ಬಂದಿದ್ದೇನೆ. ಅವರು ನಿಮ್ಮ ಮತವನ್ನು ಪಡೆದುಕೊಳ್ಳುತ್ತಾರೆ. ಆದರೆ, ಅಧಿಕಾರಕ್ಕೆ ಬಂದ ನಂತರ, ಅವರು ತಮಗಾಗಿ ‘ವೋಟ್ ಜಿಹಾದ್’ ಮಾಡುವವರಿಗೆ ಉಡುಗೊರೆಗಳನ್ನು ವಿತರಿಸುತ್ತಾರೆ” ಎಂದು ಮೋದಿ ಸುಳ್ಳಿನ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಈ ಬಾರಿ ಚುನಾವಣೆಗೂ ಮುನ್ನವೇ ಎಸ್‌ಪಿ ಮತ್ತು ಕಾಂಗ್ರೆಸ್‌ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿವೆ. ಎಲ್ಲರ ಆಸ್ತಿ ಬಗ್ಗೆ ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಅವರು ಅಧಿಕಾರಕ್ಕೆ ಬಂದರೆ, ನಿಮ್ಮ ಆಸ್ತಿಯನ್ನು ‘ವೋಟ್ ಜಿಹಾದ್’ ಮಾಡುವ ವೋಟ್‌ ಬ್ಯಾಂಕ್‌ಗೆ ನೀಡುತ್ತಾರೆ” ಎಂದಿದ್ದಾರೆ.

ಹಮೀರ್‌ಪುರದಲ್ಲಿ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿಯ ಕುನ್ವರ್ ಪುಷ್ಪೇಂದ್ರ ಸಿಂಗ್ ಚಂದೇಲ್ ಮತ್ತು ಎಸ್‌ಪಿಯ ಅಜೇಂದ್ರ ಸಿಂಗ್ ಲೋಧಿ ನಡುವೆ ಪ್ರಬಲ ಸ್ಪರ್ಧೆ ನಡೆಯುತ್ತಿದೆ. ಹಮೀರ್‌ಪುರದಲ್ಲಿ ಐದನೇ ಹಂತದಲ್ಲಿ ಮೇ 20 ರಂದು ಮತದಾನ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...