ಲೋಕಸಭೆ ಚುನಾವಣೆ| ಬಿಜೆಪಿ ಸೋಲಿನ ಬಳಿಕ ಅಯೋಧ್ಯೆ ಜನರ ನಿಂದನೆ; ಕ್ರಮಕ್ಕೆ ಎಸ್‌ಪಿ ನಾಯಕ ಆಗ್ರಹ

Date:

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ನಂತರ ಅಯೋಧ್ಯೆಯ ಜನರನ್ನು ನಿಂದಿಸುವವರನ್ನು ಬಂಧಿಸುವಂತೆ ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಶನಿವಾರ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಂಡೆ, “ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದಾಗಿನಿಂದ ಅನೇಕ ಜನರು ಅಯೋಧ್ಯೆಯ ಮತದಾರರ ವಿರುದ್ಧ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಿಂದನೀಯ ಪದಗಳನ್ನು ಬಳಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಅಯೋಧ್ಯೆಯ ಜನರ ಅಳಲು ಮತ್ತು ಅಚ್ಚರಿಗೊಳಿಸದ ಚುನಾವಣಾ ಫಲಿತಾಂಶ

“ಅಯೋಧ್ಯೆಯ ನಾಗರಿಕರನ್ನು ನಿಂದಿಸುವವರನ್ನು ಗುರುತಿಸಿ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಎಸ್‌ಪಿ ನಾಯಕ ಆಗ್ರಹಿಸಿದ್ದಾರೆ.

“ಬಿಜೆಪಿ ಸರ್ಕಾರದಿಂದ ಅಯೋಧ್ಯೆಯ ಜನರು ಪ್ರತಿ ಹಂತದಲ್ಲೂ ವಂಚನೆಗೆ ಒಳಗಾಗಿದ್ದಾರೆ” ಎಂದು ಆರೋಪಿಸಿದ ಅವರು, “ಅಯೋಧ್ಯೆಯ ಜನರ ಮನೆ, ಅಂಗಡಿಗಳನ್ನು ಧ್ವಂಸಗೊಳಿಸಿದ್ದು, ಸೂಕ್ತ ಪರಿಹಾರವನ್ನೂ ನೀಡಿಲ್ಲ. ಸರಕಾರದ ಆದೇಶದ ಮೇರೆಗೆ ಪೊಲೀಸ್ ಆಡಳಿತವು ಬೆದರಿಕೆ ಹಾಕಿದೆ, ಲೂಟಿ ಮಾಡಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ?  ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲಿನ ಮುಖಭಂಗ; ದಲಿತ ಅಭ್ಯರ್ಥಿಯ ಗೆಲ್ಲಿಸಿಕೊಂಡ ಸಮಾಜವಾದಿ ಪಕ್ಷ

“ನೊಂದ ಸಾರ್ವಜನಿಕರು ದೂರು ನೀಡಿದರೂ ಕೂಡಾ ಯಾರೂ ಅದಕ್ಕೆ ಕಿವಿಕೊಟ್ಟಿಲ್ಲ. ಸಾರ್ವಜನಿಕರು ಲೋಕಸಭೆ ಚುನಾವಣೆಯಲ್ಲಿ ಅವಕಾಶ ಸಿಕ್ಕಾಗ ಬಿಜೆಪಿಯನ್ನು ಸೋಲಿಸಿ ಸಮಾಜವಾದಿ ಪಕ್ಷವನ್ನು ಆಯ್ಕೆ ಮಾಡಿದರು” ಎಂದು ಹೇಳಿದರು.

“ಅಯೋಧ್ಯೆಯಲ್ಲಿ ಬಿಜೆಪಿಗಿದ್ದ ದುರಹಂಕಾರವನ್ನು ಇಲ್ಲಿನ ಜನ ಒಡೆದು ಹಾಕಿದ್ದಾರೆ. ಇಂದು ಪ್ರಧಾನಿ ಮೋದಿ ಪ್ರಧಾನಿಯಾಗುವುದಕ್ಕಿಂತ ಬಿಜೆಪಿ ಅಯೋಧ್ಯೆ ಸೋತಿರುವ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತಿದೆ. ಇದರಿಂದಾಗಿ ಬಿಜೆಪಿ ಏಜೆಂಟರು ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಟೀಕೆ ಮಾಡುತ್ತಿದ್ದಾರೆ” ಎಂದು ಎಸ್‌ಪಿ ನಾಯಕ ತೇಜ್ ನಾರಾಯಣ್ ಪಾಂಡೆ ಆರೋಪಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ ‘ಅಯೋಧ್ಯೆ’ಯ ಸೋಲು: ರಾಮನೂರಿನಲ್ಲಿ ಮೋದಿಯ ಹಿನ್ನಡೆಗೆ ಕಾರಣವೇನು?

ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಫೈಜಾಬಾದ್‌ನ ಹಾಲಿ ಬಿಜೆಪಿ ಸಂಸದ ಲಲ್ಲು ಸಿಂಗ್‌ ಅವರನ್ನು ಎಸ್‌ಪಿಯ ಅವಧೇಶ್‌ ಪ್ರಸಾದ್‌ ಸೋಲಿಸಿದ್ದಾರೆ. ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ರಾಮಮಂದಿರ ರಾಜಕಾರಣ ಮಾಡಿದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಸೋತಿರುವುದಕ್ಕೆ ಬಿಜೆಪಿ ಬೆಂಬಲಿಗರು ಅಯೋಧ್ಯೆಯ ಜನರನ್ನು ನಿರಂತರವಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...