‘ಮಾತನಾಡಲು ಅವಕಾಶ ಕೇಳಿದರೆ ಓಡಿ ಹೋದ ಸ್ಪೀಕರ್’

Date:

ಲೋಕಸಭೆಯಲ್ಲಿ ಮಾತನಾಡಲು ನಮಗೆ ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನೀಡುತ್ತಿಲ್ಲ. ಅವಕಾಶ ಕೇಳಿದರೆ ಅವರು ಓಡಿ ಹೋಗುತ್ತಾರೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, “ಸರ್ಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುತ್ತಿದೆ. ವಿಪಕ್ಷಗಳಿಗೆ ಸದನದಲ್ಲಿ ಮಾತನಾಡಲು ಸ್ಪೀಕರ್ ಅವಕಾಶ ಕೊಡುತ್ತಿಲ್ಲ. ನನಗೆ ಮಾತನಾಡಲು ಅವಕಾಶ ಕೊಡಬೇಕೆಂದು ಕೇಳಿದರೆ, ಅವರು ಓಡಿಹೋದರು. ಇದು ಸದನ ನಡೆಸುವ ಮಾರ್ಗವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿಪಕ್ಷ ನಾಯಕನಾಗಿ ನಾನು ಮಾತನಾಡಲು ಕಳೆದ ವಾರವೂ ನನಗೆ ಅವಕಾಶ ಕೊಡಲಿಲ್ಲ. ಈ ವಾರ ಅವಕಾಶ ಕೇಳಿದಾಗ, ಅವರು ನನಗೆ ಅವಕಾಶ ಕೊಡಲಿಲ್ಲ. ಮಾತನಾಡಲು ಬಿಡಲಿಲ್ಲ. ಬದಲಾಗಿ, ನನ್ನ ಬಗ್ಗೆ ಆಧಾರವಿಲ್ಲದ ಹೇಳಿಕೆ ನೀಡಿದರು. ಅನಗತ್ಯವಾಗಿ ಸದನ ಮುಂದೂಡಿದರು” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದನದಲ್ಲಿ ವಿಪಕ್ಷ ನಾಯಕನಿಗೆ ಮಾತನಾಡಲು ಹೆಚ್ಚು ಅವಕಾಶ ನೀಡಬೇಕು. ನಾನು ಕುಂಭಮೇಳ, ನಿರುದ್ಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲು ಬಯಸಿದ್ದೆ. ಆದರೆ, ನನಗೆ ಮಾತನಾಡಲು ಬಿಡುತ್ತಿಲ್ಲ. ಪ್ರತಿ ಬಾರಿಯೂ ನಾನು ಮಾತನಾಡಲು ಆರಂಭಿಸಿದಾಗ, ನನ್ನನ್ನು ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಹುಲ್ ಮಾತಿಗೆ ಪ್ರತಿಕ್ರಿಯಿಸಿರುವ ಸ್ಪೀಕರ್, “ಸದನದಲ್ಲಿ ಸದಸ್ಯರ ನಡವಳಿಕೆಯು ಮಾನದಂಡಗಳಿಗೆ ಅನುಗುಣವಾಗಿ ಇಲ್ಲದ ಹಲವಾರು ನಿರ್ದರ್ಶನಗಳಿವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...