ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಖಾದರ್, ಕೆಲ ಹೊತ್ತು ಮಾತುಕತೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಸದ್ಯ ಗುಣಮುಖರಾಗಿದ್ದಾರೆ. ರಾಜ್ಯದ ಜನರ ಆಶೀರ್ವಾದ ಅವರ ಮೇಲಿದೆ. ವೈದ್ಯರ ಸಲಹೆಯ ಮೇರೆ ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ’ ಎಂದು ತಿಳಿಸಿದರು.
Today morning visited the Apollo Hospital in Jayanagar to enquire about the health condition of former Chief Minister of Karnataka Shri. @hd_kumaraswamy Ji , who is undergoing treatment. I pray for his quick recovery & good health. pic.twitter.com/2SQTAuV6iS
— UT Khadér (@utkhader) September 1, 2023
ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...
ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...
ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...
ನಿನ್ನೆ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಚಲುವರಾಯಸ್ವಾಮಿ, ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಐಸಿಯುವಿನಿಂದ ಸ್ಪೆಷಲ್ ವಾರ್ಡ್‌ಗೆ ‘ಶಿಫ್ಟ್’ ಮಾಡಲಾಗಿದೆ.





