ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್ – ಡೆಪ್ಯೂಟಿ ಸ್ಪೀಕರ್: ಸದನದಲ್ಲಿ ನಡೆದ ಘಟನೆ ಬಗ್ಗೆ ವರದಿ ಸಲ್ಲಿಕೆ

Date:

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಮತ್ತು ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ವಿಧಾನಸಭೆಯಿಂದ ಬಿಜೆಪಿಯ 10 ಮಂದಿ ಶಾಸಕರನ್ನು ಅಮಾನತುಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸ್ಪೀಕರ್ ಯು ಟಿ ಖಾದರ್‌ ಮಾಹಿತಿ ನೀಡಿದರು. ಈ ವೇಳೆ ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಉಪಸ್ಥಿತರಿದ್ದರು.

ರಾಜ್ಯಪಾಲರ ಭೇಟಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ಪೀಕರ್, ”ನಿನ್ನೆ ಸದನದಲ್ಲಿ ನಡೆದ ಎಲ್ಲ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ನನ್ನ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೇನೆ. ಸಂಪೂರ್ಣ ವರದಿ ಸಲ್ಲಿಕೆ ಮಾಡಿದ್ದೇನೆ. ರಾಜ್ಯಪಾಲರೂ ಸಹ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಯು ಟಿ ಖಾದರ್ 2

“ಜುಲೈ 17, 18 ರಂದು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ದೇಶದ ಪ್ರತಿ ಪಕ್ಷಗಳ ಕಾರ್ಯಕ್ರಮದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೋಕಾಲ್ ಇಲ್ಲದವರಿಗೂ ಪಿಎ ರೀತಿ ಕೆಲಸ ಮಾಡುವಂತೆ ಮಾಡಿದ್ದಾರೆ” ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನಮಂಡಲ ಅಧಿವೇಶನದಲ್ಲಿ ಗದ್ದಲ ಪ್ರಾರಂಭಿಸಿದ್ದರು.

ಈ ವೇಳೆ ಸದನದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ ಬಳಿಕ, ಬಿಜೆಪಿ ಸದಸ್ಯರು ಸದನದ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆ ಕೆಲ ಬಿಜೆಪಿ ಸದಸ್ಯರನ್ನು ಭುಜದ ಮೇಲೆ ಹೊತ್ತು ಮಾರ್ಷಲ್‌ಗಳು ಹೊರ ಹಾಕಿದ್ದರು.

ಈ ಸುದ್ದಿ ಓದಿದ್ದೀರಾ? ನಿನ್ನೆ ನಡೆದ ಸದನದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವ ವಿಚಾರ: ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ

ಸದನದಲ್ಲಿ ಅಗೌರವ ತೋರಿದ ಬಿಜೆಪಿ ಶಾಸಕರಾದ ಡಾ. ಸಿ ಎನ್‌ ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್ ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಅವರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...