ಜ. 22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ

Date:

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸದ್ಯ ದೇಶಾದ್ಯಂತ ಪರ-ವಿರೋಧ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಎಲ್ಲ ಬೆಳವಣಿಗೆಯ ನಡುವೆ ಅಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮಗೆ ಕೇಂದ್ರದಿಂದ ಯಾವ ಸೂಚನೆಯೂ ಬಂದಿಲ್ಲ. ನಾವೇ ನಿರ್ಧಾರ ತೆಗೆದುಕೊಂಡಿದ್ದೇವೆ. ಬಿಜೆಪಿಯವರ ಥರ ನಾವು ನಾಗಪುರದ ಸೂಚನೆಗೆ ಕಾಯುವುದಿಲ್ಲ. ನಾವು ಕೂಡ ಹಿಂದೂಗಳೇ. ಯಾವ ಸಮಯದಲ್ಲಿ ಪೂಜೆ ಮಾಡಬೇಕು ಅಂತ ತಿಳಿಸುತ್ತೇವೆ” ಎಂದು ಬಿಜೆಪಿಯವರಿಗೆ ಟಾಂಗ್ ನೀಡಿದ್ದಾರೆ.

“ಶ್ರೀರಾಮ ಆದರ್ಶ ಪುರುಷ. ನಮ್ಮ ದೇಶದಲ್ಲಿ ಲಕ್ಷಗಟ್ಟಲೇ ದೇವಾಲಯಗಳು ಇವೆ. ಶ್ರೀರಾಮನದ್ದು ಸಾವಿರಾರು ವರ್ಷಗಳ ಇತಿಹಾಸ. ಶ್ರೀರಾಮ ನಡೆದುಕೊಂಡ ರೀತಿ ನೋಡಿ ಅವರನ್ನು ಪೂಜಿಸುತ್ತಾರೆ. ಮುಜರಾಯಿ ಇಲಾಖೆ ವತಿಯಿಂದ ಪೂಜೆ ಮಾಡಲು ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಕ್ರಾಂತಿ ಮತ್ತು ಯುಗಾದಿ ಹಬ್ಬದ ಸಂದರ್ಭದಲ್ಲೂ ಕೂಡ ವಿಶೇಷ ಪೂಜೆ ಮಾಡಲು ಹೇಳಲಾಗಿದೆ. ರಾಮನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹೊಸ ದೇವಸ್ಥಾನದ ಕಾರ್ಯಕ್ರಮ ಯಶಸ್ವಿ ಆಗಲಿ. ಕಾಂಗ್ರೆಸ್​ನವರು ನಿಜವಾದ ಹಿಂದೂಳಾಗಿದ್ದು, ಹಿಂದು ಧರ್ಮ ಪಾಲಿಸುತ್ತಾರೆ. ನಾವು ಎಂದೂ ಕೂಡ ಇದರ ಮೇಲೆ ರಾಜಕೀಯ ಮಾಡಿಲ್ಲ” ಎಂದು ಬಿಜೆಪಿಯವರ ವಿರುದ್ಧ ಕಿಡಿಕಾರಿದರು.

“ಶ್ರೀಕಾಂತ್ ಪೂಜಾರಿಯನ್ನು ಬಿಜೆಪಿಯವರು ಕರಸೇವಕರು ಅನ್ನುತ್ತಿದ್ದಾರೆ. ಕರಸೇವಕನ ವಿರುದ್ಧ 16 ಪ್ರಕರಣಗಳಿವೆ. ಕಾನೂನು ಉಲ್ಲಂಘನೆ ಮಾಡಿ ಏನು ಬೇಕಾದ್ರೂ ಮಾಡಬಹುದಾ” ಎಂದು ಪ್ರಶ್ನಿಸಿದ ಸಚಿವ ರಾಮಲಿಂಗಾರೆಡ್ಡಿ, “ನಾವು ವಿಪಕ್ಷದಲ್ಲಿ ಇದ್ದಾಗ ನಮ್ಮ ಮೇಲೂ ಪ್ರಕರಣ ದಾಖಲಾಗಿತ್ತು. ನಮ್ಮ ಎಲ್ಲಾ ಮುಖಂಡರ ಮೇಲೆಯೂ ಪ್ರಕರಣಗಳಿವೆ. ಬಿಜೆಪಿಗರಿಗೆ ಕಾನೂನಿನ ಅರಿವು ಇಲ್ಲವಾ? ಎಂದು ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

“ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ” ಎಂದ ವಿಪಕ್ಷ ನಾಯಕ ಅಶೋಕ್

ಮುಜರಾಯಿ ಇಲಾಖೆಯ ಆದೇಶದ ಪ್ರತಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, “ಕಡೆಗೂ ರಾಮಭಕ್ತಿಗೆ ಕಾಂಗ್ರೆಸ್ ಸರ್ಕಾರ ಶರಣಾಗಿದೆ” ಎಂದಿದ್ದಾರೆ.

“ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ. ಅಯೋಧ್ಯೆಯ ನವ್ಯ, ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನವಾದ ಜ. 22ರಂದು ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ” ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...