ಸಿಎಂ ಆಗಬೇಕೆಂಬ ಕನಸಿರುವವರಿಂದ ಬದಲಾವಣೆಯ ಊಹಾಪೋಹ: ಯತೀಂದ್ರ ಸಿದ್ದರಾಮಯ್ಯ

Date:

ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ, ಅಂಥವರೇ ಸಿಎಂ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ನಲ್ಲಿ `ಸೆಪ್ಟೆಂಬರ್ ಕ್ರಾಂತಿ’ ಹಾಗೂ ಸಿಎಂ ಬದಲಾವಣೆ ವದಂತಿ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದಾಗಿನಿಂದಲೂ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಇದನ್ನು ಹೇಳುತ್ತಲೇ ಇದ್ದಾರೆ. ಕೆಲವು ಗುಂಪಿನವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ. ಅದಕ್ಕೆ ಈ ರೀತಿ ಊಹಾಪೋಹಗಳನ್ನು ಹರಡುತ್ತಿದ್ದಾರೆ. ಸರ್ಕಾರ ಬಂದಾಗಿನಿಂದಲೂ ಕೂಡ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಬೆಂಬಲ ಇದೆ ಎಂದರು.

ಶಾಸಕರು ಕೂಡ ಬೆಂಬಲ ಕೊಟ್ಟಿದ್ದಾರೆ, ಆ ಗುಂಪು ಯಾವುದು ಎಂದು ನನಗೆ ಗೊತ್ತಿಲ್ಲ. ರಾಜಣ್ಣ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಹೈಕಮಾಂಡ್ ಕೂಡ ಬದಲಾವಣೆ ಮಾಡುತ್ತೆ ಅಂತ ಹೇಳಿಲ್ಲ. ಆ ರೀತಿಯಾದ ಸೂಚನೆಯನ್ನು ಹೈಕಮಾಂಡ್ ಕೂಡ ಕೊಟ್ಟಿಲ್ಲ. ಹೀಗಾಗಿ ಸಿದ್ದರಾಮಯ್ಯನವರು ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಗಳ ಹುದ್ದೆಗೆ ಅರ್ಹತೆ ಇರುವವರು ಇದ್ದಾರೆ. ಕೆಲ ಶಾಸಕರು ಹೇಳಿರುವುದು ಸರ್ಕಾರದ ವಿರುದ್ಧವಾಗಿ ಪಕ್ಷದ ವಿರುದ್ಧವಾಗಿ ಅಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಇಲ್ಲ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ವಿಪಕ್ಷ ನಾಯಕ ಆರ್ ಅಶೋಕ್ ಕೊಟ್ಟ ಮಾಹಿತಿಗೆ ಮಹತ್ವ ಕೊಡಬೇಕಿಲ್ಲ. ಅವರು ಸರ್ಕಾರ ಬಂದಾಗಿನಿಂದಲೂ, ಮುಡಾ ಪ್ರಕರಣದ ವೇಳೆಯೂ ಸಿಎಂ ಬದಲಾಗುತ್ತಾರೆ ಎಂದು ಹೇಳಿದ್ದರು. ವಿಪಕ್ಷಗಳ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. ಡಿಕೆಶಿ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು. ಮೊದಲೇ ಹೇಳಿದಂತೆ ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...