ಬಿಜೆಪಿಯವರು ಬೇಕಾದಾಗ ಜಾಮೂನು ನೀಡಿ, ಬೇಡವಾದಾಗ ವಿಷ ಕೊಡುತ್ತಾರೆ: ಎಸ್‌ ಟಿ ಸೋಮಶೇಖರ್

Date:

  • ‘ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ’
  • ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ: ವಾಗ್ದಾಳಿ

ಬಿಜೆಪಿಯವರು ಹೇಗೆ ಎಂದರೆ ಅಧಿಕಾರಕ್ಕಾಗಿ ತಮ್ಮ ಪಕ್ಷಕ್ಕೆ ಕರೆದುಕೊಳ್ಳುವಾಗ ಜಾಮೂನು ಕೊಡುತ್ತಾರೆ. ಬೇಡವಾದಾಗ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಹರಿಹಾಯ್ದರು.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, “ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ. ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇ‌ನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.

“ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನು. ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು. ಈಗ ಎಸ್ ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿ ಫಾಲೋ ಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಇದು ಬಿಜೆಪಿಗರಿಗೆ ಸಹಿಸಲು ಆಗುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ಸಂಸದ ಬಿ.ವೈ ರಾಘವೇಂದ್ರ

“ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದೆಲ್ಲಾ ಸುಳ್ಳು. ಯಡಿಯೂರಪ್ಪ ಅವರ ಮಾತು ನಂಬಿ ಬಿಜೆಪಿಯಲ್ಲಿದ್ದೇ‌ನೆ. ಆದರೆ ಕೆಲವರು ನನ್ನನ್ನು ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ, ಆದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈಶ್ವರಪ್ಪ ವಿರುದ್ಧ ಕಿಡಿ

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕಿಡಿಕಾರಿದ ಅವರು, “ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ಪಕ್ಷದಿಂದ ಬಿಟ್ಟು ಹೋಗಲಿ ಅಂತ ಹೇಳಲು ಈಶ್ವರಪ್ಪ ಯಾರು? ಅವರೇನು ರಾಜ್ಯಾಧ್ಯಕ್ಷನಾ? ಈಶ್ವರಪ್ಪನನ್ನು ನಂಬಿ ನಾನು ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...