ಕಾಲ್ತುಳಿತ | ಅಧಿಕಾರಿಗಳ ಮೂತಿಗೆ ಒರೆಸುವುದು ಬಿಟ್ಟು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಶೋಭಾ ಕರಂದ್ಲಾಜೆ

Date:

ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಮಾತನಾಡಿದ ಅವರು, “ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ” ಎಂದು ಅಭಿಪ್ರಾಯಪಟ್ಟರು.

“ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ನೀವು ಯಾವುದೇ ನಿರ್ಧಾರ ಮಾಡಿದರೂ ಅದಕ್ಕೆ ನಾವು ಸಿದ್ಧ ಎಂದು ಸರಕಾರ ತಿಳಿಸಲಿ. ಬೆಂಗಳೂರು ಪೊಲೀಸ್ ಕಮಿಷನರ್ ಸರಕಾರದ ಅಂಗವೇ ಆಗಿದ್ದಾರೆ. ಸರಕಾರದ್ದೇನೂ ತಪ್ಪಿಲ್ಲವೆಂದಾದರೆ ಅವರನ್ನು ಅಮಾನತು ಮಾಡುವುದು ಸರಕಾರಕ್ಕೆ ಕಪ್ಪು ಚುಕ್ಕಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವತ್ತು ಆರ್‌ಸಿಬಿಯವರು, ಮ್ಯಾನೇಜ್‍ಮೆಂಟ್ ತಂಡದವರನ್ನೂ ಬಂಧಿಸಿದ್ದಾರೆ. ಯಾಕೆ ನಿಮ್ಮನ್ನು ಬಂಧಿಸಬಾರದು? ನಟ ಅಲ್ಲು ಅರ್ಜುನ್ ಕಾರ್ಯಕ್ರಮದಲ್ಲಿ ಒಬ್ಬರು ಸತ್ತಾಗ ಅಲ್ಲು ಅರ್ಜುನ್‍ರನ್ನು ಮನೆಯಿಂದ ಎಳೆದುಕೊಂಡು ಬಂದಿದ್ದರು. ಅಲ್ಲಿಯೂ ಕಾಂಗ್ರೆಸ್ ಸರಕಾರ ಇತ್ತು. ಅವರಂತೆ ಇಲ್ಲಿ ಯಾಕೆ ಆಗುತ್ತಿಲ್ಲ” ಎಂದು ಪ್ರಶ್ನಿಸಿದರು.

ತಪ್ಪಿಸಿಕೊಳ್ಳುವ ಯತ್ನ

“ಸಿದ್ದರಾಮಯ್ಯನವರು ತಪ್ಪಿಸಿಕೊಳ್ಳಲು ನೋಡುತ್ತಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್.ಸಿ.ಬಿ. ತಂಡಕ್ಕೆ ಅಭಿನಂದನೆ ಇರುವ ಕುರಿತು, ಹಬ್ಬದ ವಾತಾವರಣದ ಬಗ್ಗೆ ಹಾಗೂ ಎಲ್ಲರೂ ಬರುವಂತೆ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದರು” ಎಂದು ವಿವರಿಸಿದರು.

“ರಾಜ್ಯ ಕ್ರಿಕೆಟ್ ಸಂಸ್ಥೆಯು 3ರಂದು ಒಂದು ಪತ್ರ ಬರೆದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ತಿಳಿಸಿದ್ದರು. ಡಿಪಿಆರ್ ಕಾರ್ಯದರ್ಶಿಗೆ ಈ ಪತ್ರ ಬರೆದಿದ್ದರು. ನಿಮ್ಮ ಡಿಪಿಆರ್ ಕಾರ್ಯದರ್ಶಿ, ನಿಮ್ಮ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದರು? ಮುಖ್ಯಮಂತ್ರಿಗಳೇ ಇದು ನೀವು ನಡೆದುಕೊಂಡ ರೀತಿ” ಎಂದು ಟೀಕಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...