ನಿಮ್ಮ ಆದರ್ಶ ಅನುಸರಿಸಿ, ಭರವಸೆಗೆ ಬದ್ಧರಾಗಿರಿ: ಮೋದಿ-ಅಮಿತ್ ಶಾಗೆ ಸೋನಮ್ ವಾಂಗ್ಚುಕ್ ಮನವಿ

Date:

ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸುಮಾರು 20 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ “ನಿಮ್ಮ ಆದರ್ಶ ಅನುಸರಿಸಿ, ಭರವಸೆಗೆ ಬದ್ಧರಾಗಿರಿ” ಎಂದು ಮನವಿ ಮಾಡಿದ್ದಾರೆ.

“ನೀವು ಭಗವಂತ ರಾಮ ಮತ್ತು ಹಿಂದೂ ವೈಷ್ಣವರ ಆದರ್ಶವನ್ನು ಅನುಸರಿಸಿ. ನೀವು ಲಡಾಖ್‌ಗೆ ಈ ಹಿಂದೆ ನೀಡಿದ ಭರವಸೆಗೆ ಬದ್ಧರಾಗಿರಿ” ಎಂದು ಸೋಮವಾರ ವಿಡಿಯೋ ಮೂಲಕ ಸೋನಮ್ ವಾಂಗ್ಚುಕ್ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಹೇಳಿದರು. ಈ ಬಗ್ಗೆ ಎಕ್ಸ್‌ನಲ್ಲಿ ವಾಂಗ್ಚುಕ್ ವಿಡಿಯೋವನ್ನು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಡಾಖ್ ಪ್ರತಿಭಟನೆಯಲ್ಲಿ ಇಂದು ನನ್ನೊಂದಿಗೆ ಸುಮಾರು 2500 ಜನರು ಸೇರಿದ್ದರು. ಇಲ್ಲಿನ ಒಟ್ಟು ಜನಸಂಖ್ಯೆ 3 ಲಕ್ಷವಾದರೂ ಕೂಡಾ ಈ 20 ದಿನದಲ್ಲಿ ಲೇಹ್ ಮತ್ತು ಕಾರ್ಗಿಲ್‌ನಲ್ಲಿ 60,000 ಜನರು ಪ್ರತಿಭಟನೆ ನಡೆಸುತ್ತಿದ್ದಾರೆ,” ಎಂದು ಹೇಳಿರುವ ವಾಂಗ್ಚುಕ್ ಎರಡು ಸಂದೇಶಗಳನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ?  ನಮಗೆ ಪ್ರಜಾಪ್ರಭುತ್ವ ಬೇಕು: ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ಹೆಚ್ಚಿದ ಪ್ರತಿಭಟನೆ

“ಒಂದು, ಪ್ರಧಾನಿ ಮೋದಿ ಅವರಿಗೆ ಮತ್ತೊಂದು ಗೃಹ ಸಚಿವ ಅಮಿತ್ ಶಾ ಅವರಿಗೆ. ಅಮಿತ್ ಶಾ ಅವರು ಒಂದು ಸಂದರ್ಶನದಲ್ಲಿ ತಾನು ಜೈನನಲ್ಲ ಹಿಂದೂ ವೈಷ್ಣವ ಎಂದು ಹೇಳಿಕೊಂಡಿರುವುದನ್ನು ಕೇಳಿದ್ದೇನೆ. ವೈಷ್ಣವರಿಗೆ ಹಲವಾರು ವ್ಯಾಖ್ಯಾನಗಳಿವೆ. ಆದರೆ ನಾನು ಇಷ್ಟಪಡುವುದು ‘ವೈಷ್ಣವರಾದವರೂ ಇತರರ ನೋವು ತಿಳಿದಿರುತ್ತಾರೆ. ಇತರರಿಗೆ ಒಳ್ಳೆಯದ್ದನ್ನು ಮಾಡುತ್ತಾರೆ’ ಎಂಬ ವ್ಯಾಖ್ಯಾನವನ್ನು” ಎಂದು ಅಮಿತ್ ಶಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮೋದಿ ಅವರಿಗೆ ನನ್ನ ಇನ್ನೊಂದು ಸಂದೇಶ. ಮೋದಿ ಅವರು ರಾಮ ಭಕ್ತರು. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದಾರೆ. ಆದರೆ ಭಗವಂತ ರಾಮನ ಮೌಲ್ಯಗಳೇನು? ರಾಮಚರಿತಮಾನಸದಲ್ಲಿ ರಘುಕುಲದವರು ಪ್ರಾಣ ಹೋದರೂ ತಮ್ಮ ವಚನವನ್ನು (ಮಾತನ್ನು) ತಪ್ಪಲ್ಲ ಎಂದು ಹೇಳಲಾಗುತ್ತದೆ. ತನ್ನ ಮಾತು ತಪ್ಪಬಾರದು ಎಂಬ ಕಾರಣಕ್ಕೆ ಭಗವಂತ ರಾಮ 14 ವರ್ಷಗಳ ಕಾಲ ವನವಾಸಕ್ಕೆ ಹೋದರು. ರಾಮ ಭಕ್ತರಾದ ಮೋದಿಯವರು ಕೂಡ ಈ ಆದೇಶವನ್ನು ಪಾಲಿಸಬೇಕು. ತಾನು ಈ ಹಿಂದೆ ಚುನಾವಣೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

“ಚುನಾವಣೆ ವೇಳೆ ನೀಡಿದ ಭರವಸೆಯನ್ನು ಈಡೇರಿಸಿ ತಾನು ನಿಜವಾದ ರಾಮ ಭಕ್ತ ಎಂದು ಸಾಬೀತುಪಡಿಸಲು ನಾನು ಪ್ರಧಾನಿ ಮೋದಿಯಲ್ಲಿ ಮನವಿ ಮಾಡುತ್ತೇವೆ. ಇಲ್ಲವಾದರೆ ಯಾರೂ ಕೂಡಾ ಇಂತಹ ರಾಜಕಾರಣಿಗಳನ್ನು, ಅವರ ಭರವಸೆಯನ್ನು ನಂಬುವುದಿಲ್ಲ. ತಮ್ಮ ಆದರ್ಶವನ್ನು ಮರೆಯದಂತೆ ನಾನು ಅಮಿತ್ ಶಾ ಮತ್ತು ಮೋದಿ ಅವರಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

ಲಡಾಖ್‌ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ಈಗ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ. 2019ರ ಲೋಕಸಭೆ ಚುನಾವಣೆ ಮತ್ತು 2020 ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ, ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...