ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್

Date:

  • ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ಬಿಜೆಪಿ ನಾಯಕರು: ಫೋಟೋ ವೈರಲ್
  • ‘ಬಿಜೆಪಿಯ ದಂಡ ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ’ ಎಂದ ಕಾಂಗ್ರೆಸ್

ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿದ್ದರು.

ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ಭೇಟಿಗೆ ಬಿಜೆಪಿ ನಾಯಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಹೊರಗಡೆ ಸಾರ್ವಜನಿಕರಂತೆ ನಿಂತು ಮೋದಿಗೆ ಕೈಬೀಸುತ್ತಿರುವ ಫೋಟೋವೊಂದು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಈ ನಡುವೆ ಟ್ವೀಟ್ ಮಾಡಿ ಬಿಜೆಪಿ ನಾಯಕರ ಕಾಲೆಳೆದು ವ್ಯಂಗ್ಯವಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೆ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ. ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?’ ಎಂದು ಬರೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಮುನಿರತ್ನ, ಕೆ. ಗೋಪಾಲಯ್ಯ, ಆರ್‌ ಅಶೋಕ್ ಕಾಣಿಸಿಕೊಂಡಿದ್ದಾರೆ.

ನಾಲ್ವರು ಮುಖಂಡರು ಬ್ಯಾರಿಕೇಡ್ ಆಚೆ ನಿಂತು ಪ್ರಧಾನಿ ಮೋದಿಗೆ ಕೈ ಬೀಸಿದ್ದು, ಅದರಲ್ಲೂ ಮುನಿರತ್ನ ಬ್ಯಾರಿಕೇಡ್ ಮೇಲೆ ಹೆಜ್ಜೆ ಇಟ್ಟು ಪ್ರಧಾನಿಗೆ ಕೈ ಬೀಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದು, ಬಿಜೆಪಿ ನಾಯಕರ ಯೋಗ್ಯತೆ ಏನು ಎಂಬುದನ್ನು ಪ್ರಧಾನಿ ಮೋದಿ ತೋರಿಸಿಕೊಟ್ಟಿದ್ದಾರೆ ಎಂದು ಹಲವರು ಬರೆದುಕೊಂಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಕಂಡಿರುವ ಹೀನಾಯ ಸೋಲಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಈ ರೀತಿಯ ಬೆಳವಣಿಗೆಯು ರಾಜ್ಯದ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.

ರಾಜ್ಯದಲ್ಲಿ ಬಿಜೆಪಿಯ ಹೀನಾಯ ಸೋಲಿನ ನಂತರ, ಪ್ರತಿಪಕ್ಷ ನಾಯಕರ ಆಯ್ಕೆಯೂ ಆಗಿಲ್ಲ. ಈ ಸಂದರ್ಭದಲ್ಲಿಯೇ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದರೂ, ರಾಜ್ಯ ಬಿಜೆಪಿ ನಾಯಕರ ಭೇಟಿಗೆ ಅವಕಾಶ ಕೊಡದೆ ಇರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಸ್ತುವಾಗಿದೆ. ಮೋದಿಯವರು ತೆರೆದ ಕಾರಿನಲ್ಲಿ ತೆರಳುತ್ತಿದ್ದಾಗ ಬೀದಿಯಲ್ಲಿ ನಿಂತು ಕೈ ಬೀಸಿದ ನಾಯಕರ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...